ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ.

ಬೆಂಗಳೂರು.07.ಏಪ್ರಿಲ್.25:-ರಾಜ್ಯ ಸರ್ಕಾರ ಈ ವರ್ಷದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿದ ನಂತರ ನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಅಂಶಗಳನ್ನು ಪ್ರಕಟಿಸಲಾಯಿತು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧ, ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿ ಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸಲಾಗುವುದು.

ಉದ್ದೇಶಿತ ಸಮಿತಿಯಲ್ಲಿ ಅಧಿಕಾರಿಗಳು ಮಾತ್ರವಲ್ಲದೆ, ಸಂಬಂಧಿಸಿದ ಕ್ಷೇತ್ರದಲ್ಲಿ ಪರಿಣಿತರಾದ ಅಧಿಕಾರೇತರ ಸದಸ್ಯರೂ  ಇರುತ್ತಾರೆ. ಸಮಿತಿಯ ಕಾರ್ಯವ್ಯಾಪ್ತಿ, ಕಾಲಾವಧಿ ಮುಂತಾದ ನಿಯಮಗಳನ್ನು ರೂಪಿಸಿ ಸಮಿತಿಯನ್ನು ರಚಿಸಲಾಗುವುದು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಬಡಾವಣೆಗಳಲ್ಲಿ ಹಾಗೂ ಗ್ರಾಮಠಾಣ ಹೊರತುಪಡಿಸಿದಂತೆ ನಿರ್ಮಿಸಿದ ಕಟ್ಟಡಗಳನ್ನು ಸಕ್ರಮಗೊಳಿಸುವ ಸಲುವಾಗಿ ಇ-ಸ್ವತ್ತು ಖಾತಾ ಒದಗಿಸಲು ಅವಕಾಶ ಮಾಡಿಕೊಡುವ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳು ಇತ್ತೀಚೆಗೆ ಒಪ್ಪಿಗೆ ನೀಡಿವೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇಂತಹ ಸುಮಾರು 96 ಲಕ್ಷ ಸ್ವತ್ತುಗಳು ಇವೆ ಎಂದು ಅಂದಾಜು ಮಾಡಲಾಗಿದೆ.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

3 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

3 hours ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

3 hours ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

3 hours ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

3 hours ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

4 hours ago