ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ:

ಬೀದರ್.15.ಮೇ.25. ಬೀದರ್ ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಅನೇಕ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 25 ರಂದು ಉಪ ಚುನಾವಣೆ ನಡೆಯಲಿದ್ದು, ಮತದಾನದ ವೇಳೆ ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ.

ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ:

ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ ಮೇ.25:- ಬೀದರ ತಾಲ್ಲೂಕಿನ ಗ್ರಾಮ ಪಂಚಾಯತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ

ಉಪ ಚುನಾವಣೆಗೆ ದಿನಾಂಕ: 25-05-2025 ರಂದು ಮತದಾನ ನಡೆಯಲಿದ್ದು, ಸದರಿ ಉಪಚುನಾವಣೆ ನ್ಯಾಯಸಮ್ಮತ ಹಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಹಾಗೂ ಚುನಾವಣೆ ಸಮಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳು ಕೈಗೊಳ್ಳಬೇಕಾಗಿರುವುದರಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10(ಬಿ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಗ್ರಾಮ ಸ್ವರಾಜ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2020ರ ಕಲಂ 308 (ಎಸಿ) ರಂತೆ ಚುನಾವಣೆ ನಡೆಯಲಿರುವ ಕೆಳಕಂಡ ಗ್ರಾಮ ಪಂಚಾಯತಿಗಳ ಸಂಪೂರ್ಣ ವ್ಯಾಪ್ತಿ

ದಿನಾಂಕ: 23-05-2025 ರ ಸಂಜೆ 5:00 ಗಂಟೆಯಿoದ ದಿನಾಂಕ: 25-05-2025 ರ ಮಧ್ಯರಾತ್ರಿ 12:00 ಗಂಟೆಯವರೆಗೆ ಎಲ್ಲಾ ವಿಧದ ಅಬಕಾರಿ ಸನ್ನದುಗಳನ್ನು ಮುಚ್ಚಲು ಹಾಗೂ ಮಧ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ಮಾಡುವುದನ್ನು ನಿಷೇಧಿಸಿ ‘ಶುಷ್ಕ ದಿನ” ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಆದೇಶಿಸಿರುತ್ತಾರೆ.


ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ ವಿವರ:

ಬೀದರ ತಾಲ್ಲೂಕಿನ:

ಮರಕುಂದಾ ಗ್ರಾಮ ಪಂಚಾಯತ (01), ನಾಗೋರಾ ಗ್ರಾಮ ಪಂಚಾಯತ (01), ಬಗದಲ್ ಗ್ರಾಮ ಪಂಚಾಯತ (01), ಅಲಿಯಾಬಾದ.ಜೆ ಗ್ರಾಮ ಪಂಚಾಯತ (01),

ಬಸವಕಲ್ಯಾಣ ತಾಲ್ಲೂಕಿನ ವಿವರ:

ಹಾರಕೂಡ ಗ್ರಾಮ ಪಂಚಾಯತ (01),

ಭಾಲ್ಕಿ ತಾಲ್ಲೂಕಿನ ವಿವರ:

ಮೇಹಕರ ಗ್ರಾಮ ಪಂಚಾಯತ (01),

ಕುರುಬಖೇಳಗಿ ಗ್ರಾಮ ಪಂಚಾಯತ (01),

ಔರಾದ ತಾಲ್ಲೂಕಿನ ವಿವರ:

ಹೆಡಗಾಪೂರ ಗ್ರಾಮ ಪಂಚಾಯತ (01),

ಏಕಂಬಾ ಗ್ರಾಮ ಪಂಚಾಯತ (04)

ಹುಮನಾಬಾದ ತಾಲ್ಲೂಕಿನ ವಿವರ:

ಮದರಗಾಂವ ಗ್ರಾಮ ಪಂಚಾಯತ (01),

ನಂದಗಾoವ ಗ್ರಾಮ ಪಂಚಾಯತ (07)

ಸೇಟಿ ಒಟ್ಟು 11 ಗ್ರಾಮ ಪಂಚಾಯತಗಳಲ್ಲಿ 20 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

3 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

6 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

6 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

6 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

13 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

13 hours ago