|

ಗ್ರಾಮ ಪಂಚಾಯ್ತಿ ಚುನಾವಣೆ ಕುರಿತು ಸರ್ಕಾರದಿಂದ ಆದೇಶ

ಬೆಂಗಳೂರು.09.ಆಕ್ಟೋಬರ.25:- ಅವಧಿ ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದ್ದರೇ, ಇತ್ತ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆ ರಾಜ್ಯದ ಎಲ್ಲಾ ಸಿಇಓಗಳಿಗೆ ಸೂಚಿಸಿದೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

2025-26 ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ದೃಢೀಕರಿಸಿ ಈ ಕಛೇರಿಯ ಇ-ಮೇಲ್ ವಿಳಾಸ prcdirdev@gmail.com ದಿನಾಂಕ: 24-10-2025 ರೊಳಗಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *