ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್, ಸರ್ಕಾರ ಆದೇಶ.!

ಬೆಂಗಳೂರು.03.ಜೂನ್.25:-  ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಕುರಿತು-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಹಾಗೂ ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರ ಹಂತದಲ್ಲಿ ಉಲ್ಲೇಖಿತ ಆದೇಶದಲ್ಲಿನ ವರ್ಗಾವಣೆ ಮಾರ್ಗಸೂಚಿಗಳನ್ವಯ ಇಲಾಖೆಯಲ್ಲಿ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಸರ್ಕಾರವು ತೀರ್ಮಾನಿಸಿದೆ. ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಮಾಡಲು ಇಲಾಖಾ ಮುಖ್ಯಸ್ಥರು ಸಕ್ಷಮ ಪ್ರಾಧಿಕಾರವಾಗಿರುತ್ತಾರೆ.

ವರ್ಗಾವಣೆಯನ್ನು ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತಾಲಯ, ಬೆಂಗಳೂರು ಇವರು ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಸದರಿ ತಂತ್ರಾಂಶವನ್ನು ಬಳಸಿ ಅಪರ ಆಯುಕ್ತರು, ಕಲಬುರಗಿ ಹಾಗೂ ಅಪರ ಆಯುಕ್ತರು, ಧಾರವಾಡ ಇವರು ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು.

ಮುಂದುವರೆದು, ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಸಾರ್ವಜನಿಕ ಗ್ರಂಥಾಲಯ ಇಲಾಖೆ ಮತ್ತು ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯ ಇಲಾಖಾ ಮುಖ್ಯಸ್ಥರುಗಳು ಸಹ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆನ್‌ಲೈನ್ ಮುಖಾಂತರ ಪಾರದರ್ಶಕವಾಗಿ ಕೈಗೊಳ್ಳತಕ್ಕದ್ದು.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

10 minutes ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

22 minutes ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

2 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

10 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

10 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

10 hours ago