ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದರು.
ಸಮೀಪದ ರಸ್ತೆ ಪಕ್ಕದಲ್ಲಿರುವ ಅಪಾಯಕಾರಿಯಾದ ತೆರೆದ ಬಾವಿಗಳನ್ನು ಪರಿಶೀಲಿಸಿದ ಅವರು, ಇಂತಹ ಬಾವಿಗಳನ್ನು ತಕ್ಷಣವೇ ಮುಚ್ಚುವಂತೆ ಸಂಬಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವರು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.