ಚನ್ನಬಸವೇಶ್ವರ ಗುರುಕುಲ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ.!

ಬೀದರ್‌ನ ಚನ್ನಬಸವೇಶ್ವರ ಗುರುಕುಲದಲ್ಲಿ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ

ಪರೀಕ್ಷೆ ಬರೆದ ೨೦೦೦ ವಿದ್ಯಾರ್ಥಿಗಳು

ಬೀದರ್, ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ೨ ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಗೆ ಎಸ್ಸೆಸ್ಸೆಲ್ಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ೧೫೦೦ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದರು. ಆದರೆ ಕಾಲೇಜು ಆರಂಭದ ವರ್ಷದಲ್ಲೇ ನಿರೀಕ್ಷೆಗೂ ಮೀರಿ ಯಶಸ್ಸು ದೊರತಿದೆ.

ಪರೀಕ್ಷೆಗೆ ಆನ್‌ಲೈನ್ ಮೂಲಕ ೧೫೦೦ ಮತ್ತು ಆಫ್‌ಲೈನ್ ಮೂಲಕ ೫೦೦ ಸೇರಿ ಒಟ್ಟು ೨ ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಬೀದರ್ ನಗರದ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದಲ್ಲದೇ ಜಿಲ್ಲೆಯ ಎಲ್ಲ ತಾಲೂಕು ಸೇರಿ ಉಡುಪಿ, ಕಲಬುರಗಿ, ವಿಜಯಪುರ ಮತ್ತು ಮಹಾರಾಷ್ಟç ರಾಜ್ಯದ ಭಾಗದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಬೆಳಿಗ್ಗೆ ೧೦ ರಿಂದ ೧೨ ಮತ್ತು ೧ ರಿಂದ ೩ ಗಂಟೆ ವರೆಗೆ ಎರಡು ಹಂತದಲ್ಲಿ ಪರೀಕ್ಷೆ ಜರುಗಿದ್ದವು. ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಮೊದಲ ಹಂತದಲ್ಲಿ ಹೆಚ್ಚು ಅಂಕ ಗಳಿಸುವ ೨೫ ವಿದ್ಯಾರ್ಥಿಗಳಿಗೆ ಉಚಿತ ಎರಡು ವರ್ಷ ಪಿಯುಸಿ ಶಿಕ್ಷಣ ಮತ್ತು ಸ್ಪರ್ಧಾತ್ಮಕ ತರಬೇತಿ ನೀಡಲಾಗುತ್ತದೆ. ನಂತರದ ೨೫ ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕದಲ್ಲಿ ಅರ್ಧದಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ತಿಳಿಸಿದ್ದಾರೆ.

ಬೆಸ್ಟ್ ಆಫ್ ಲಕ್ :

ಪರೀಕ್ಷೆ ತರಗತಿ ಕೋಣೆಗಳಿಗೆ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯರಾದ ಬಸವರಾಜ ಮೊಳಕೀರೆ, ಲೋಕೇಶ ಉಡಬಾಳೆ, ಉಪನ್ಯಾಸಕರಾದ ಸಾಯಿನಾಥ ಬಿರಾದಾರ್, ರವಿ ಬಿರಾದಾರ್, ಶಿವಪ್ರಕಾಶ ಕುಂಬಾರ, ಹಣಮಂತ ಜ್ಯಾಂತಿಕರ್, ಜಯಲಕ್ಷ್ಮಿ, ಗುರುಪ್ರಿತ ಕೌರ, ಪ್ರವೀಣ ಸ್ವಾಮಿ, ಪ್ರಶಾಂತ ರೆಡ್ಡಿ ಇದ್ದರು.


ಕೋಟ್
ಬೀದರ್ ನಗರದಲ್ಲಿ ಹೊಸದಾಗಿ  ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜು ಆರಂಭಿಸಿದ್ದೇವೆ. ನುರಿತ ಬೋಧಕರ ತಂಡ ಇದ್ದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಸಿಗಲಿದೆ. ಕಾಲೇಜು ಆರಂಭದ ವರ್ಷದಲ್ಲೇ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಗೆ ೨ ಸಾವಿರ ವಿದ್ಯಾರ್ಥಿಗಳು ಹಾಜರಾಗಿರುವುದು ಸಂತಸ ತರಿಸಿದೆ.
– ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

3 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

5 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago