Home » ಲೈವ್ ನ್ಯೂಸ್ » ಚಿಕ್ಕವಂಕಲಕುoಟಾ: ಇಂದು ಪ್ರಜಾಸೇವಾ ಆಂದೋಲನ ಸಭೆ

ಚಿಕ್ಕವಂಕಲಕುoಟಾ: ಇಂದು ಪ್ರಜಾಸೇವಾ ಆಂದೋಲನ ಸಭೆ

ಕೊಪ್ಪಳ.05.ಸೆಪ್ಟೆಂಬರ್.26: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಯಲಬುರ್ಗಾದ ಚಿಕ್ಕವಂಕಲಕುoಟಾ ಗ್ರಾಮದಲ್ಲಿ ಸೆಪ್ಟೆಂಬರ್ 5 ರಂದು ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿದೆ.

ಯಲಬುರ್ಗಾ ತಾಲ್ಲೂಕಿನ ಚಿಕ್ಕವಂಕಲಕುoಟಾ ಗ್ರಾಮದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಸೆ.5 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 4.30 ಗಂಟೆಯವರೆಗೆ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ.


ಈ ಸಭೆಯಲ್ಲಿ ಯಲಬುರ್ಗಾ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ವಿವಿಧ ಸರ್ಕಾರಿ ಸೇವೆಗಳಿಗೆ ಸಂಬoಧಿಸಿದ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ದೊರಕಿಸುವುದು ಹಾಗೂ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಈ ಆಂದೋಲನ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Author

ಪ್ರಮುಖ ಸುದ್ದಿ

Stock market

Astrology