ಬೀದರ.07.ಫೆಬ್ರುವರಿ.25:-ಪ್ರತಿ ವರ್ಷದಂತೆ ಈ ವರ್ಷವು ಕೂಡ ಫೆಬ್ರುವರಿ. 19 ರಂದು ಬರುವ ಛತ್ರಪತಿ ಶಿವಾಜಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಅರೆ ಸರ್ಕಾರಿ ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಛತ್ರಪತಿ ಶಿವಾಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು. ನಂತರ ಛತ್ರಪತಿ ಶಿವಾಜಿಯವರ ಭಾವಚಿತ್ರದ ಮೆರವಣಿಗೆಯು ಪ್ರಾರಂಭಗೊಂಡು ಶಿವಾಜಿ ವೃತ್ತ, ಹರಳಯ್ಯ ವೃತ್ತ, ಜನರಲ್ ಕರಿಯಪ್ಪ ವೃತ್ತ, ಅಂಬೇಡ್ಕರ ವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರೋಟರಿ ವೃತ್ತದಿಂದ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದವರೆಗೆ ನಡೆಯುವುದು ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.
ನಗರಸಭೆ ವತಿಯಿಂದ ಮೆರವಣಿಗೆ ಹಾದು ಹೋಗುವ ಮಾರ್ಗದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶಿವಾಜಿ ವೃತ್ತಕ್ಕೆ ಸುಣ್ಣ ಬಣ್ಣ, ಅಲಂಕಾರ, ಎಲ್ಲ ವೃತ್ತಗಳ ಮೇಲೆ ದೀಪಾಲಂಕಾರ ಮಾಡುವುದು. ಶಿಕ್ಷಣ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿಯವರ ಜೀವನ ಚರಿತ್ರೆ ನಿಬಂಧ ಸ್ಪರ್ಧೆಗಳನ್ನು ಏರ್ಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2 ಕಲಾ ತಂಡಗಳ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಪೊಲೀಸ್ ಇಲಾಖೆ ವತಿಯಿಂದ ಮೆರವಣಿಗೆ ಹಾದು ಹೋಗುವ ಸ್ಥಳಗಳಲ್ಲಿ ಸಂಚಾರಿ ನಿಯಂತ್ರಣ ಬಂದೋಬಸ್ತ ವ್ಯವಸ್ಥೆ ಮಾಡುವುದು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಸಮಾಜದ ಮುಖಂಡರಾದ ಮದನರಾವ ಬಿರಾದಾರ, ರಘುನಾಥ ಜಾಧವ, ವೆಂಕಟರಾವ ಮಹಾಂದೆ, ಮಾಧವರಾವ ಗುರೂಜಿ, ರಾಜಕುಮಾರ ಪಾಟೀಲ, ಪಂಡಿತ ಜಾಧವ, ಅಶೋಕ ಚವ್ಹಾಣ, ಸುರೇಶ ರಾಠೋಡ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…