ಜನನಿ ಸುರಕ್ಷಾ ಯೋಜನೆ/ ಮಾತೃವಂದನಾ ಕಾರ್ಯಕ್ರಮಗಳಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಬೀದರ.08.ಫೆಬ್ರುವರಿ.25:  ಜನನಿ ಸುರಕ್ಷಾ ಯೋಜನೆ ಹಾಗೂ ಮಾತೃವಂದನಾ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಎಲ್ಲ ಹೆಣ್ಣು ಮಕ್ಕಳಿಗೂ ಜಾಗೃತಿ ಅರಿವು ಮೂಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.


ಅವರು ಇಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬೀದರ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಸಂಚರಿಸಿ ನವಜಾತ ಶಿಶುಗಳಿಗೆ ನೀಡುತ್ತಿರುವ ಲಸಿಕೆ ಕುರಿತು ಮಾಹಿತಿ ಪಡೆದರು.
  ಪ್ರತಿ ಗ್ರಾಮ ಪಂಚಾಯತನಲ್ಲಿ ನಗರದ ಬಡಾವಣೆಗಳಲ್ಲಿ ಈ ಕುರಿತು ವಿಶೇಷ ಅರಿವು ಜಾಥಾ ಕಾರ್ಯಕ್ರಮಗಳು ಜರುಗಿಸಬೇಕೆಂದರು.

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರತಿ ತಿಂಗಳು ವಿಶೇಷ ಮಾಹಿತಿ ಅರಿವು ಜಾಗೃತಿ ಆಂದೋಲನಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.


ಜನನಿ ಸುರಕ್ಷಾ ಯೋಜನೆಯಡಿ ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಯಾಗುವ ಪ್ರತಿ ಮಹಿಳೆಗೆ ಗ್ರಾಮೀಣ ಪ್ರದೇಶದಲ್ಲಿ ಮೊದಲ ಹಾಗೂ ಎರಡನೇ ಹೆರಿಗೆಗೆ ತಲಾ 700 ರೂ. ಹಾಗೂ ನಗರಗಳಲ್ಲಿ ರೂ 600 ಫಲಾನುಭವಿ ಖಾತೆಗೆ ಜಮೆ ಮಾಡಲಾಗುತ್ತಿದೆ.

ಮಾತೃವಂದನಾ ಕಾರ್ಯಕ್ರಮದಡಿ ಮೊದಲ ಹೆರಿಗೆಗೆ 5 ಸಾವಿರ ರೂ. ಎರಡು ಕಂತುಗಳಲ್ಲಿ ಹಾಗೂ 2ನೇ ಹೆರಿಗೆಯಲ್ಲಿ ಹೆಣ್ಣು ಮಗು ಜನಿಸಿದರೆ 6 ಸಾವಿರ ರೂ. ಒಂದೇ ಕಂತಿನಲ್ಲಿ ಜಮೆಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಮಾತೃವಂದನಾ ಯೋಜನೆಯಡಿ ಮಹಿಳೆಯರು ಅಂಗನವಾಡಿ ಕೇಂದ್ರಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ 10629 ಮಹಿಳೆಯರು ನೋಂದಣಿಯಾಗಿದ್ದಾರೆ.

ಈ ಪೈಕಿ ಪ್ರಥಮ ಬಾರಿಗೆ ಗರ್ಭಿಣಿಯಾದ 6592 ಮಹಿಳೆಯರಿಗೆ 5 ಸಾವಿರ ರೂ. ನಂತೆ 3.29 ಕೋಟಿ ರೂ. ಹಾಗೂ ಎರಡನೇ ಹೆರಿಗೆಗೆ ಹೆಣ್ಣು ಮಗುವಾದಲ್ಲಿ 6 ಸಾವಿರಗಳಂತೆ 3298 ಫಲಾನುಭವಿಗಳಿಗೆ 1.97 ಕೋಟಿ ರೂ.ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.


ಎಲ್ಲಾ ಮಹಿಳೆಯರು ನವಜಾತ ಶಿಶುಗಳಿಗೆ ರೋಗ ತಡೆಗಟ್ಟಲು ಬಾಲಕ್ಷಯ,  ರೋಟಾವೈರಸ್ ಅತಿಸಾರ ಭೇದಿ, ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ಹೆಚ್‍ಇನ್‍ಫ್ಲಎನ್‍ಜ ಬಿ ಮತ್ತು ಹೆಪಟೈಟಿಸ್ ಬಿ, ನ್ಯೂಮೊಕೊಕಲ್ ಕಾಯಿಲೆ, ರೋಟಾವೈರಸ್ ಅತಿಸಾರ ಭೇದಿ,  ದಡಾರ ಮತ್ತು ರುಬೆಲ್ಲಾ, ನ್ಯೂಮೊಕೊಕಲ್ ಕಾಯಿಲೆ, ಮೆದುಳು ಜ್ವರ, ಇರುಳು ಕುರುಡು ಈ ಎಲ್ಲಾ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಈವರೆಗೆ 26588 ಮಕ್ಕಳಿಗೆ ಎಲ್ಲಾ ತರಹದ ಬಿಸಿಜಿ, ಹಿಪಾಟಿಟಿಸ್, ಪೋಲಿಯೋ, ರೋಟಾವೈರಸ್ ಸೇರಿದಂತೆ ಎಲ್ಲಾ ಲಸಿಕೆಗಳನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲೆಯ ಪ್ರತಿಯೊಬ್ಬ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

5 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

6 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

6 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

6 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

6 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

7 hours ago