ಜಾಗರೂಕತನದಿಂದ ಅಪಘಾತ ರಹಿತಚಾಲನೆ ಮಾಡಿ,-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!


ಬೀದರ.23.ಜನವರಿ.25:- ಇಂದು ಬೀದರ ಜಿಲ್ಲಾ ಅಧಿಕಾರಿ ಅವರ ಕಚೇರಿಯಲ್ಲಿ ನೆಯುತ್ತಿರುವ ಕಾರ್ಯಕ್ರಮದದ ವಿವರ.ನೂರು ಪ್ರಯಾಣಿಕರನ್ನು ಹೊತ್ತು ಒಯ್ಯುವ ರಸ್ತೆ ಸಾರಿಗೆ ನಿಗಮದ ಚಾಲಕರು ಜವಾಬ್ದಾರಿಯಿಂದ ಜಾಗರೂಕತನದಿಂದ ಅಪಘಾತರಹಿತವಾಗಿ ಚಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು.
ಅವರು ನಗರದ ಹಳೆಯ ಬಸ್ ನಿಲ್ದಾಣದಲ್ಲಿಂದ ಬೀದರ ಮಾರ್ಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಮ್ಮಿಕೊಂಡ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿಯೋಜಿಸಲಾದ ಹೊರಗುತ್ತಿಗೆಯ ಚಾಲಕ ಅಭ್ಯರ್ಥಿಗಳಿಗೆ ಕಾರ್ಯಾದೇಶ ವಿತರಿಸಿ ಅವರು ಮಾತನಾಡುತ್ತಿದ್ದರು.


ಪ್ರತಿ ಚಾಲಕರು ಪ್ರಾಮಾಣಿಕತೆಯಿಂದ ಮೈಯೆಲ್ಲಾ ಕಣ್ಣಾಗಿಸಿಕೊಂಡು ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಸೇವೆ ಸಲ್ಲಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.


‘ವೇಗಮಿತಿ’ ನಿಯಂತ್ರಣ, ತಪ್ಪು ಚಾಲನೆ ಕಡೆ ಗಮನವಿಡಬೇಕು. ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದರು.


ಗುಲಬರ್ಗಾ ರಸ್ತೆ ಸಾರಿಗೆ ನಿಗಮದ ವಿಭಾಗದ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಚಪ್ಪ ಅವರು ಮಾತನಾಡಿ, ಇಡೀ ವಿಭಾಗದಲ್ಲಿ ಪ್ರಥಮ ಬಾರಿಗೆ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ಹೊರಗುತ್ತಿಗೆ ಚಾಲಕರನ್ನು ನಿಯೋಜಿಸಲಾಗುತ್ತಿದೆ. ಈ ಹಿಂದೆ ವಿವಿಧ ಏಜೇನ್ಸಿಗಳಿಂದ ನಿಯೋಜಿಸಲಾದಾಗ ವಿವಿಧ ರೀತಿಯ ತೊಂದರೆಗಳನ್ನು ಚಾಲಕರು ಅನುಭವಿಸುತ್ತಿದ್ದರು.

ಆದ್ದರಿಂದ ಈ ಬಾರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಾರದರ್ಶಕವಾಗಿ ರೋಸ್ಟರ್ ಪ್ರಕಾರ ಮೆರಿಟ್ ಆಧಾರದ ಮೇಲೆ 150 ಜನ ಚಾಲಕ ಹಾಗೂ 50 ಜನ ಮೆಕ್ಯಾನಿಕ್‍ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಚಾಲಕರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ತಿಳಿಸಿದರು.


ಈ ಸಂದರ್ಭಧಲ್ಲಿ ಬೀದರ ವಿಭಾಗೀಯ ಸಾರಿಗೆ ನಿಯಂತ್ರಣ ಅಧಿಕಾರಿ ಆನಂದ ಭದ್ರಕಲೆ, ಮುಖ್ಯ ಭದ್ರತಾಧಿಕಾರಿ ಚಂದ್ರಕಾಂತ ಫುಲೇಕರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

16 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

31 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

42 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago