|

ಜಾತಿಗಣತಿ ಸಮೀಕ್ಷಾದಾರರಿಗೆ 20.000 ಗೌರವಧನ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು.08.ಅಕ್ಟೋಬರ್.25:-  ಬೆಂಗಳೂರು ನಗರ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ನರಕ ಚತುರ್ದಶಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಮೀಕ್ಷೆಯ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷಾದಾರರಿಗೆ ₹20,000 ಗೌರವಧನ ಕೊಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಯಾರು ಸರ್ವೆ ಕಾರ್ಯದಲ್ಲಿ ತೊಡಗಿಸಿಕೊಳ್ಳೋದಿಲ್ಲ. ಸಮೀಕ್ಷೆ ಮಾಡಲು ಒಪ್ಪೋದಿಲ್ಲ ಅವರ ವಿರುದ್ಧ ರಾಜ್ಯ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಅಕ್ಟೋಬರ್.19ಕ್ಕೆ ಮೊದಲು ರಾಜ್ಯದಲ್ಲಿ ಸಂಪೂರ್ಣವಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಮುಕ್ತಾಯಗೊಳಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

Similar Posts

Leave a Reply

Your email address will not be published. Required fields are marked *