ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ.

ಬೆಂಗಳೂರು.15.ಫೆ.25:- ಇಂದು ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರವನ್ನು ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ/ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಅರ್ಜಿ ಸಲ್ಲಿಸಿ ಪಡೆಯಲು ಅರ್ಜಿದಾರರುಗಳಿಗೆ ಅಡಚಣೆ ಉಂಟಾಗಿರುತ್ತದೆ

ರಾಜ್ಯಾಧ್ಯಂತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಯಾಗದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿತ್ತು.

ಈ ಸಮಸ್ಯೆ ನೀಗಿಸಿ, ವಿದ್ಯಾರ್ಥಿಗಳಿಗೆ ಈ ಪ್ರಮಾಣ ಪತ್ರ ವಿತರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಈ ಸಂಬಂಧ ಕಂದಾಯ ಇಲಾಖೆಯಿಂದ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ: 10.02.2025 ರಿಂದ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರವನ್ನು ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ/ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಅರ್ಜಿ ಸಲ್ಲಿಸಿ ಪಡೆಯಲು ಅರ್ಜಿದಾರರುಗಳಿಗೆ ಅಡಚಣೆ ಉಂಟಾಗಿರುತ್ತದೆ ಎಂದಿದೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಕೋರಿಕೆಯ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ರಾಜಸ್ವ ನಿರೀಕ್ಷಕರುಗಳು ಕ್ಷೇತ್ರ ತಪಾಸಣೆಯನ್ನು ನಡೆಸಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಪತ್ರಗಳನ್ನು ವಿತರಿಸಲು ಜಿಲ್ಲೆಯ ಎಲ್ಲಾ ತಹಸೀಲ್ದಾರ್ ರವರಿಗೆ ಸೂಚನೆಯನ್ನು ನೀಡಲಾಗಿರುತ್ತದೆ ಎಂದು ಹೇಳಿದೆ.

ಸಾರ್ವಜನಿಕರು ಆಯಾ ತಾಲೂಕಿನ ತಹಸೀಲ್ದಾರ್ ರವರನ್ನು ಸಂಪರ್ಕಿಸಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಪಡೆಯತಕ್ಕದ್ದು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಪತ್ರಗಳನ್ನು ಪಡೆಯಲು ಅನಾನುಕೂಲತೆ ಉಂಟಾದಲ್ಲಿ ಅಥವಾ ಯಾವುದೇ ಅಡಚಣೆಯಾದಲ್ಲಿ, ದೂರವಾಣಿ ಸಂಖ್ಯೆ: 8277862938 ನ್ನು ( ರಾಕೇಶ್, AJSK ಸಮಾಲೋಚಕರು) ಸಂಪರ್ಕಿಸುವಂತೆ ತಿಳಿಸಿದೆ.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

2 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

2 hours ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

2 hours ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

2 hours ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

2 hours ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

3 hours ago