ಜಾತಿ ಗಣತಿ ಸಮೀಕ್ಷೆ’ಯ ಜಾತಿ ಕಾಲಂನಲ್ಲಿ ತಪ್ಪಾಗಿ ಕೋಡ್ ನಮೂದು : ಶಿಕ್ಷಕ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.17.ಮೇ.25:- ಜಾತಿ ಗಣಿತಿ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ಜಾತಿ ಕೋಡನ್ನು ತಪ್ಪಾಗಿ ನಮೂದಿಸಿದ ಕಾರಣ ಸದರಿ ಶಿಕ್ಷಕರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸೋಮಪ್ಪ ತಂದೆ ಭೀಮಪ್ಪ ಸರಕಾರಿ ಹಿರಿಯ ಪ್ರಥಮಿಕ ಶಾಲೆ ಹೆಗ್ಗಾಪೂರು ತಾಂಡಾ ತಾ:ಲಿಂಗಸುಗೂರು ಇವರು ಕರ್ತವ್ಯದಲ್ಲಿ ತಾಳಿರುವ ಬೇಜವಾಬ್ದಾರಿತನ ಮತ್ತು ನಿರ್ಲಕ್ಷತೆ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.

ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ರವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ದಿನಾಂಕ:05-05-2025 ರಿಂದ 23-05-2025 ರವರೆಗೆ ನಡೆಯಲಿರುವ ಸಮೀಕ್ಷಾ ಕಾರ್ಯಕ್ಕೆ ಸರ್ಕಾರದ ಆದೇಶದಂತೆ ಈಗಾಗಲೇ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಿ ಆದೇಶಿಸಲಾಗಿರುತ್ತದೆ. ಸದರಿ ಸಮೀಕ್ಷಾ ಕಾರ್ಯಕ್ಕೆ ಸರಕಾರಿ ಹಿರಿಯ ಪ್ರಥಮಿಕ ಶಾಲೆ ಶಾಲೆ ಹೆಗ್ಗಾಪೂರು ತಾಂಡಾದ ಶಿಕ್ಷಕರಾದ ನಿಮ್ಮನ್ನು ಜಾತಿ ಗಣತಿ ಸಮೀಕ್ಷೆಗಾಗಿ ನೇಮಿಸಲಾಗಿರುತ್ತದೆ.

ಅಂಗಸುಗೂರು ತಾಲೂಕಿನ ನಾಗಲಾಪೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹೆಗ್ಗಾಪೂರು ತಾಂಡಾದಲ್ಲಿ ಜಾತಿ ಗಣತಿ ಸಮೀಕ್ಷೆ ಮಾಡುವಾಗ ಜಾತಿ ಕಾಲಂನಲ್ಲಿ ಹಿಂದೂ ಲಂಬಾಣಿ ಎಂದು ನಮೂದಿಸದೇ ಆದಿ ಆಂದ್ರ ಎಂದು ತಪ್ಪಾಗಿ ನಮೂದಿಸಿರುತ್ತಾರೆ ಎಂದು ಉಲ್ಲೇಖ (1)ರನ್ವಯ ಅಧ್ಯಕ್ಷರು, ಆಲ್ ಇಂಡಿಯಾ ಬಂಜಾರ ಸೇವಾ ಸಂಗ (ರಿ) ತಲೂಕ ಘಟಕ ಅಂಗಸುಗೂರುರವರು ದೂರನ್ನು ಸಲ್ಲಿಸಿರುತ್ತಾರೆ.

ಸದರಿ ಶಿಕ್ಷಕರು ಆಪ್‌ನಲ್ಲಿ ಮಾಹಿತಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕೋಡ್ ನಂ. 001 ಆದಿ ಆಂದ್ರ ಎಂದು ತಪ್ಪಾಗಿ ಆಯ್ಕೆ ಮಾಡಿದ್ದು ಮತ್ತು ಲಂಬಾಣಿ ಎಂಬ ಜಾತಿ ಸಂಖ್ಯೆ ಕೋಡ್ ನಂ. 017.2 ಎಂದು ಆಯ್ಕೆ ಮಾಡಬೇಕಾಗಿದ್ದು, 50 ಮನೆಗಳ ಜಾತಿ ಗಣತಿ ತಪ್ಪಾಗಿ ನಮೂದಿಸಲಾಗಿರುತ್ತದೆ ಎಂದು ಉಲ್ಲೇಖ (2) ಮತ್ತು (3)ರನ್ವಯ ತಹಶೀಲ್ದಾರರು ಅಂಗಸುಗೂರು ರವರು ಸಹಾಯಕ ಆಯುಕ್ತರು, ಅಂಗಸುಗೂರುರವರು ವರದಿಯನ್ನು ಸಲ್ಲಿಸಿರುತ್ತಾರೆ.

ಉಲ್ಲೇಖ (4)ರನ್ವಯ ಕಾರ್ಯದರ್ಶಿಗಳು, ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ರವರ ಏಕ ಸದಸ್ಯ ಆಯೋಗ ಬೆಂಗಳೂರುರವರು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳುವ ನೋಟೀಸನ್ನು ಜಾರಿ ಮಾಡಿರುತ್ತಾರೆ.

ಒಟ್ಟಿನಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತು ಮೊಬೈಲ್ ಆಯಪ್‌ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರ ಮಾಹಿತಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಲಂಬಾಣಿ ಜಾತಿಯ ಕೋಡ್ ನಂ.017.2 ಎಂದು ಆಯ್ಕೆ ಮಾಡುವ ಬದಲು, ಕೋಡ್ ನಂ.001 ಆದಿ ಆಂದ್ರ ಎಂದು ತಪ್ಪಾಗಿ ಆಯ್ಕೆ ಮಾಡಿ 50 ಮನೆಗಳ ಸಮೀಕ್ಷೆ ಮಾಡಿರುತ್ತೀರಿ.

ಒಬ್ಬ ಜವಾಬ್ದಾರಿಯುತ ಶಿಕ್ಷಕರಾದ ನೀವು ತಾಲೂಕ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಂದ ತರಬೇತಿಯನ್ನು ಪಡೆದ ನಂತರ ಸಮೀಕ್ಷೆ ಕುರಿತು ಸಿದ್ಧಪಡಿಸಿರುವ ಕೈಪಿಡಿಯನ್ನು ಅಧ್ಯಯನ ಮಾಡಿ ಅಲ್ಲದೆ ಸದರಿ ವಿಷಯದ ಕುರಿತು ವಿಡಿಯೋ ಸಂವಾದ ಸಭೆಯಲ್ಲಿ ತಿಳಿಸಲಾಗಿರುತ್ತದೆ. ಆದರೂ ಪರಿಶಿಷ್ಟ ಜಾತಿಯ ಕೋಡ್ ಅನ್ನು ಸರಿಯಾಗಿ ಆಯ್ಕೆ ಮಾಡುವುದು ನಿಮ್ಮ ಅಧ್ಯ ಕರ್ತವ್ಯವಾಗಿದ್ದು, 50 ಕುಟುಂಬಗಳ ಜಾತಿಯ ಮಾಹಿತಿಯನ್ನು ತಪ್ಪಾಗಿ ನಮೂದಿಸಿ ಬೇಜವಾಬ್ದಾರಿತನ ತೋರಿರುತ್ತೀರಿ.

ಈ ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಶ್ರೀ.ಸೋಮಪ್ಪ ತಂದೆ ಭೀಮಪ್ಪ ಸರಕಾರಿ ಹಿರಿಯ ಪ್ರಥಮಿಕ ಶಾಲೆ ಹೆಗ್ಗಾಪೂರು ತಾಂಡಾ ತಾ:ಲಿಂಗಸುಗೂರು ಇವರು ಕರ್ತವ್ಯದಲ್ಲಿ ಬೇಜವಾಬ್ದಾರಿತನ ಮತ್ತು ನಿರ್ಲಕ್ಷತನ ವಹಿಸಿದ್ದು ಕಂಡುಬಂದಿದ್ದು, ಸದರಿಯವರನ್ನು ಸೇವೆಯಿಂದ ಅಮಾನತ್ತುಗೊಳಿಸಲು ಈ ಕೆಳಕಂಡ ಆದೇಶ.

ಪ್ರಸ್ತಾವನೆಯಲ್ಲಿ ವಿವರಿಸಿದಂತೆ, ಕೆ.ನಿತೀಶ್. ಭಾಜ. ಜಿಲ್ಲಾಧಿಕಾರಿಗಳು ರಾಯಚೂರು ಆದ ನಾನು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ರ ನಿಯಮ 10 (1)(ಡಿ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ.ಸೋಮಪ್ಪ ತಂದೆ ಭೀಮಪ್ಪ ಸರಕಾರಿ ಹಿರಿಯ ಪ್ರಥಮಿಕ ಶಾಲೆ ಹೆಗ್ಗಾಪೂರು ತಾಂಡಾ ತಾ:ಲಿಂಗಸುಗೂರು ಇವರ ವಿರುದ್ಧ ಮಾಡಲಾದ ಆರೋಪಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾಡಲಾದ ಆರೋಪಗಳ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದೇನೆ.

ಆರೋಪಿತ ನೌಕರರು ಕರ್ನಾಟಕ ನಾಗರೀಕ ಸೇವಾ ನಿಯಮಗಳು 1958 ರ ನಿಯಮ 98 ರನ್ವಯ ಜೀವನಾಂಶ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ ಹಾಗೂ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ತಿಳಿಸಲಾಗಿದೆ.

prajaprabhat

Recent Posts

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

2 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

7 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

8 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

8 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

8 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

8 hours ago