ಬೀದರ.27.ಜನವರಿ.25:- ರಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ತರುವ ಅಂತಾ ಕೆಲವು ದಲಿತ ಎಡಗೈ. ಬಲಗೈ ಸಂಘಟನೆಗಳು ಸತತ್ವಾಗಿ ಹೋರಾಟ ನಡೆಸುತ್ತಿದ್ದಾರೆ.ಜಾತಿ ಜನಗಣತಿ ಮಾಡಿದ ನಂತರವೇ ಒಳಮಿಸಲಾತಿ ಜಾರಿಗೆ ತರಬೇಕು ಎಂದು ಗೋರ್ ಸೇನಾ ರಾಷ್ಟ್ರೀಯ ಸಂಘಟನೆಯು ಒತ್ತಾಯ ಮಾಡಿದೆ.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋರ್ ಸೇನಾ ಮಹಿಳಾ ಅಧ್ಯಕ್ಷ ಸವಿತಾ ರಾಠೋಡ್ ಅವರು, ಜಾತಿ ಜನಗಣತಿಯು 2011ರ ನಂತರ ನಡೆದಿಲ್ಲ.
2011ರಲ್ಲಿಯೂ ನಮ್ಮ ಸಮುದಾಯದ ಜನಗಣತಿ ಸರಿಯಾಗಿ ನಡೆದಿಲ್ಲ. ಹಾಗಾಗಿ ನಮ್ಮ ಜನಸಂಖ್ಯೆ ಹೆಚ್ಚಾಗಿದ್ದು, ಒಳಮಿಸಲಾತಿಯಲ್ಲಿ ನಮ್ಮ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಒದಗಿಸುತ್ತಿಲ್ಲ. ನಾಗಮೋಹನ್ ದಾಸ್ ಅವರಿಗೆ ಭೇಟಿಯಾಗಿ ಇದರ ಬಗ್ಗೆ ಮನವಿಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಗೋವರ್ಧನ್ ರಾಠೋಡ್ ಮಾತನಾಡಿ, ಈಗ ಒಲಮೀಸಲಾತಿ ಜಾರಿಗೆ ಮಾಡಿದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಹಾಗಾಗಿ ಒಳಮೀಸಲಾತಿ ಜಾರಿಗೆ ತರುವ ಮುನ್ನ ನಮ್ಮ ಸಮುದಾಯದ ಜಾತಿ ಜನಗಣತಿ ಆಗಬೇಕು. ಜಾತಿ ಜನಗಣತಿ ನಡೆದಾಗ ಮಾತ್ರ ನಮ್ಮ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಸಿಗುತ್ತದೆ. ಒಂದು ವೇಳೆ ಜಾತಿ ಜನಗಣತಿ ನಡೆಸದೆ ಒಳಮೀಸಲಾತಿ ಜಾರಿ ಮಾಡಿದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ್ ಜಾಧವ್, ಉಪಾಧ್ಯಕ್ಷ ನೀಲಕಂಠ ರಾಠೋಡ್, ಕಾರ್ಯಧ್ಯಕ್ಷ ಬಾಬು ಜಾಧವ್ ಹಾಗೂ ಶಶಿಕಲಾ ವಸಂತ್ ಭಾಗವಹಿಸಿದ್ದರು.
ಒಳಮೀಸಲಾತಿ ಜಾರಿಗೆ ತರುವ ಮೋಟ್ ಮೊದಲು ಜಾತಿ ಗಣತಿ ಕಾರ್ಯ ಮಾಡ್ಬೇಕು ಅಂತಾ ಕೆಲವು ಸಂಗತ್ನೆಗಳು
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…