ಬೀದರ.11.ಫೆಬ್ರುವರಿ.25:-ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.
ಅವರು ಮಂಗಳವಾರದಂದು ಬೀದರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕೊಣೆ ವೀಕ್ಷಿಸಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕುಡಿಯುವ ನೀರು, ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿ ಅಲ್ಲಿನ ರೋಗಿಗಳಿಗಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದರು.
ಬ್ರಿಮ್ಸ್‍ನ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರ ಜೊತೆ ಚರ್ಚೆ ನಡೆಸಿ ಕುಂದು ಕೊರತೆ ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಅದಕ್ಕೆ ಅಗತ್ಯವಿರುವ ಪರಿಹಾರದ ಬಗ್ಗೆ ಸರ್ಕಾರಕ್ಕೆ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕರಾದ ಡಾ. ಶಿವುಕುಮಾರ ಶೆಟ್ಕರ್, ಬ್ರಿಮ್ಸ್ ಡೀನ್ ಶಾಂತಲಾ ಕೌಜಲ್ಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…