ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
1) ಪ್ರಯೋಗ ಶಾಲಾ ತಂತ್ರಜ್ಞರು/ಕಿರಿಯ ದರ್ಜೆ ಸಹಾಯಕರು 2) ಶುಶ್ರೂಷ ಅಧಿಕಾರಿ ಸೇರಿದಂತೆ 22 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಗದಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು
ಮೇ 30, 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ಅಭ್ಯರ್ಥಿಗಳು ವಿಶೇಷ ಸೂಚನೆ ಈ ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಸಿಲಾಗಿದೆ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಜಿಎನ್ಎಮ್. ಬಿಎಸ್ಸಿ ನರ್ಸಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕರ್ನಾಟಕ ಸರ್ಕಾರ ಮಾನ್ಯತೆಯಲ್ಲಿ ನರ್ಸಿಂಗ್ ವಿದ್ಯಾರ್ಹತೆ, ಮತ್ತು ನರ್ಸಿಂಗ್ ಕೌನ್ಸಿಲ್ ನೋಂದಣಿ ಹೊಂದಿರಬೇಕು.
ವಯೋಮಿತಿ:
ಹುದ್ದೆಗೆ ಅನುಗುಣವಾದ ವಯೋಮಿತಿ ಹೊಂದಿದ್ದು, ಗರಿಷ್ಠ ವಯೋಮಿತಿ 45 ವರ್ಷವಾಗಿದೆ.
ಆಯ್ಕೆ:
ಅಭ್ಯರ್ಥಿಗಳನ್ನು ಮೆರಿಟ್, ದಾಖಲಾತಿ ಪರಿಶೀಲನೆ ಮೇರೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಕೊನೆಯ ದಿನಾಂಕ:
ಅರ್ಜಿ ಸಲ್ಲಿಕೆಗೆ ಮೇ 30 ಕಡೆಯ ದಿನವಾಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು gadag.nic.in ಭೇಟಿ ನೀಡಿ.