ಕೊಪ್ಪಳ.20.ಜೂನ್.25:-ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಜೂನ್ 21 ಮತ್ತು 22 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಜೂ. 21ರಂದು ಸಂಜೆ 4 ಗಂಟೆಗೆ ರಾಯಚೂರಿನಿಂದ ರಸ್ತೆಯ ಮೂಲಕ ಹೊರಟು, ಸಂಜೆ 6ಕ್ಕೆ ಕೊಪ್ಪಳ ಜಿಲ್ಲೆ ಕಾರಟಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.
ಜೂ. 22ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 11.30ಕ್ಕೆ ಕುಕನೂರು ತಾಲ್ಲೂಕಿನ ಶಿರೂರ ಗ್ರಾಮಕ್ಕೆ ಆಗಮಿಸಿ, ದಿವಂಗತ ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರ ಜೊತೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30ಕ್ಕೆ ಅಲ್ಲಿಂದ ನಿರ್ಗಮಿಸಿ, ಸಂಜೆ 4 ಗಂಟೆಗೆ ಕಾರಟಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸಿ ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.
ಜೂ.23ಕ್ಕೆ ಬೆಳಿಗ್ಗೆ 9 ಗಂಟೆಗೆ ಕಾರಟಗಿಯಿಂದ ರಾಯಚೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…