2025-26ನೇ ಸಾಲಿಗೆ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಎರಡನೇ ತ್ರೈಮಾಸಿಕ ಅವಧಿಯ ವೇತನಾನುದಾನವನ್ನು ಬಿಡುಗಡೆ ಮಾಡುವ ಬಗ್ಗೆ.
1) 2025-26ನೇ ಸಾಲಿನಲ್ಲಿ ಪಂಚಾಯತ್‌ಗಳಿಗೆ ಒದಗಿಸಿರುವ ಆಯವ್ಯಯದ ವಿವರಗಳಿಗೆ (ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಾರ್ಯಕ್ರಮಗಳಿಗೆ) ಸಂಬಂಧಿಸಿದ -1,2,3&4.
2) ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 01 ಟಿಎಫ್‌ಪಿ 2025 ದಿನಾಂಕ: 02.04.2025.
3) ಸರ್ಕಾರದ ಆದೇಶ ಸಂಖ್ಯೆ: ಇಪಿ 185 ಎಸ್.ಟಿ.ಬಿ 2023 ದಿನಾಂಕ: 24.06.2025.
4) ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 02 ಟಿಎಫ್‌ಪಿ 2025 ದಿನಾಂಕ: 30.06.2025.
5) ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಏಕ ಕಡತ ಸಂಖ್ಯೆ:
DPI-CPIOPMP/2/2025.
ಪ್ರಸ್ತಾವನೆ:
ಮೇಲೆ ಓದಲಾದ ಕ್ರಮಾಂಕ (1)ರ 2025-26ನೇ ಸಾಲಿನಲ್ಲಿ ಪಂಚಾಯತ್‌ಗಳಿಗೆ ಒದಗಿಸಿರುವ ಆಯವ್ಯಯದ ವಿವರಗಳಿಗೆ (ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಾರ್ಯಕ್ರಮಗಳಿಗೆ) ಸಂಬಂಧಿಸಿದ ಸಂಪುಟ-1,2,3&4ರಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವೇತನಾನುದಾನವನ್ನು ಪಾವತಿಸಲು ‘ರಾಜ್ಯ ಯೋಜನೆ- ಕ್ಷೀರಭಾಗ್ಯ (ಎಂ.ಡಿ.ಎಂ)” ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02)ರ ಜಿಲ್ಲಾ ವಲಯ ವೇತನಗಳು ಉಪ ಶೀರ್ಷಿಕೆ-005 ರಡಿ ರೂ.4493.67 ಲಕ್ಷಗಳ ಅನುದಾನ ನಿಗದಿಯಾಗಿದೆ.
ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆರ್ಥಿಕ ಪ್ರತ್ಯಾಯೋಜನೆ ಆದೇಶದಲ್ಲಿ 2025-26 ಸಾಲಿನಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗೆ 03 ತಿಂಗಳ ಅನುದಾನವನ್ನು ಬಿಡುಗಡೆ ಮಾಡಲು ಆಡಳಿತ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆ ಮಾಡಿ ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (3) ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ಅನುಷ್ಠಾನ ಮಾಡಲು ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಸೃಜಿಸಲಾಗಿರುವ 30 ಶಿಕ್ಷಣಾಧಿಕಾರಿಗಳ ಹುದ್ದೆಗಳನ್ನು, 178 ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಮತ್ತು 214 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಒಟ್ಟಾರೆಯಾಗಿ 422 ಹುದ್ದೆಗಳನ್ನು ದಿನಾಂಕ: 01.04.2025 ರಿಂದ 31.03.2026 ರವರೆಗೆ ಮುಂದುವರೆಸಲು ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (4)ರ ಸರ್ಕಾರದ ಆರ್ಥಿಕ ಪ್ರತ್ಯಾಯೋಜನೆ ಆದೇಶದಲ್ಲಿ 2025-26 ಸಾಲಿನಲ್ಲಿ ಜುಲೈ-2025 ರಿಂದ ಸೆಪ್ಟೆಂಬರ್-2025ರವರೆಗೆ 03 ತಿಂಗಳ ಅನುದಾನವನ್ನು ಬಿಡುಗಡೆ ಮಾಡಲುಆಡಳಿತ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆ ಮಾಡಿ ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (5)ರ ಏಕ ಕಡತದಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು, 2025-26ನೇ ಸಾಲಿಗೆ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳಿಗೆ 2ನೇ ತ್ರೈಮಾಸಿಕ ಅವಧಿಗೆ ಅಗತ್ಯವಿರುವ ರೂ.1123.42 ಲಕ್ಷಗಳ ವೇತನಾನುದಾನವನ್ನು ‘ರಾಜ್ಯ ಯೋಜನೆ -ಕ್ಷೀರಭಾಗ್ಯ (ಎಂ.ಡಿ.ಎಂ)” ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02) ಯ ಉಪ ಶೀರ್ಷಿಕೆ: 005- ಜಿಲ್ಲಾ ವಲಯ ವೇತನಗಳಡಿ ನಿಗದಿಯಾಗಿರುವ ರೂ.4493.67 ಲಕ್ಷಗಳ ವಾರ್ಷಿಕ ಅನುದಾನದಿಂದ ಬಿಡುಗಡೆ ಮಾಡುವಂತೆ ಕೋರಲಾಗಿದೆ.
ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 44 ಎಂಎಂಎಸ್ 2025, ಬೆಂಗಳೂರು
Q: 05.07.2025
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿಗೆ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವೇತನವನ್ನು ಪಾವತಿಸಲು ‘ರಾಜ್ಯ ಯೋಜನೆ-ಕ್ಷೀರಭಾಗ್ಯ (ಎಂ.ಡಿ.ಎಂ)” ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02)ರ ಜಿಲ್ಲಾ ವಲಯ ವೇತನಗಳು ಉಪ ಶೀರ್ಷಿಕೆ-005 ರಡಿ ನಿಗದಿಪಡಿಸಲಾಗಿರುವ ರೂ.4493.67 ಲಕ್ಷಗಳ ವಾರ್ಷಿಕ ಅನುದಾನದಲ್ಲಿ ಎರಡನೇ ತ್ರೈಮಾಸಿಕ ಅವಧಿಗೆ ಸಂಬಂಧಿಸಿದ ವೇತವನ್ನು ಪಾವತಿಸಲು ರೂ.1123.42ಲಕ್ಷಗಳ ವೇತನಾನುದಾನವನ್ನು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಮುಖ್ಯ ಲೆಕ್ಕಾಧಿಕಾರಿಗಳಿಗೆ ಕೆಳಕಂಡಂತೆ ಜಿಲ್ಲಾವಾರು ಬಿಡುಗಡೆ ಮಾಡಿ ಆದೇಶಿಸಿದೆ.
3) ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಹಂತದ ವೆಚ್ಚಗಳನ್ನು ಭರಿಸಲು ಕೂಡಲೇ ಸಂಬಂಧಿಸಿದ ತಾಲ್ಲೂಕು ಪಂಚಾಯತಿಗಳಿಗೆ ಕೆ-2 ಮೂಲಕ ಹಂಚಿಕೆ ಮಾಡತಕ್ಕದ್ದು.
4) ಇನ್ನು ಮುಂದೆ ಪ್ರತಿ ತಿಂಗಳ 5ನೇ ತಾರೀಖಿನೊಳಗಾಗಿ ಅರ್ಹತೆಗೆ ಅನುಗುಣವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ನೌಕರರಿಗೆ ವೇತನವನ್ನು ಪಾವತಿಸಿರುವ ಬಗ್ಗೆ ಸಂಬಂಧಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖಚಿತಪಡಿಸಿಕೊಳ್ಳತಕ್ಕದ್ದು.
5
) ಖಜಾನೆ-2ರಡಿ ಮಧ್ಯಾಹ್ನ ಉಪಹಾರ ಯೋಜನೆಯ ಲೆಕ್ಕ ಶೀರ್ಷಿಕೆಗಳ ಮ್ಯಾಪಿಂಗ್ ಆಗಿರುವ ಬಗ್ಗೆ, ಮಧ್ಯಾಹ್ನ ಉಪಹಾರ ಯೋಜನೆಯ ಉಪ ಶೀರ್ಷಿಕೆ- 005 ರಡಿಯಲ್ಲಿ ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನ ಲಭ್ಯವಾಗಿರುವ ಬಗ್ಗೆ ನಿರ್ದೇಶಕರು, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಕಾರ್ಯಕ್ರಮ ಇವರು ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಈ ಬಗ್ಗೆ ಉದ್ಭವಿಸುವ ತಾಂತ್ರಿಕ ಸಮಸ್ಯೆಗಳನ್ನು ನಿರ್ದೇಶಕರು, ಖಜಾನೆ ಇಲಾಖೆ ರವರೊಂದಿಗೆ ಸಮಾಲೋಚಿಸಿ ನಿವಾರಿಸಿಕೊಳ್ಳತಕ್ಕದ್ದು.
6) ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಇತರೆ ಯೋಜನೆಯ ನಿಧಿ/ಅನುದಾನದೊಂದಿಗೆ ಈ ಸಂಬಳದ ಪಾವತಿಯಲ್ಲಿ ಯಾವುದೇ ಪುನರಾವರ್ತನೆ ಇಲ್ಲವೆಂದು ಎಲ್ಲಾ ಇಲಾಖಾ ಮುಖ್ಯಸ್ಥರುಗಳು ಖಚಿತಪಡಿಸಿಕೊಳ್ಳತಕ್ಕದ್ದು ಮತ್ತು ಒದಗಿಸಲಾದ ಅನುದಾನವನ್ನು ಯಾವ ಉದ್ದೇಶಕ್ಕಾಗಿ ಒದಗಿಸಲಾಗಿದೆಯೋ ಅದೇ ಉದ್ದೇಶಕ್ಕಾಗಿ ಬಳಸತಕ್ಕದ್ದು, ಇತರೆ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.
7) ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಭೌತಿಕ ಗುರಿಗಳನ್ನು ಅಂದರೆ Key Performance Indicator ಗಳನ್ನು ಅವಲೋಕನ (New Decision Support System) ತಂತ್ರಾಂಶದಲ್ಲಿ ನಿಗದಿಪಡಿಸತಕ್ಕದ್ದು ಹಾಗೂ ಅದರನ್ವಯ ಭರಿಸಲಾಗುವ ವೆಚ್ಚದ ವಿವರಗಳು ಪ್ರತಿ ಮಾಹೆ ಅವಲೋಕನ (New Decision Support System) ជ ಖಜಾನೆ-2 ಮುಖಾಂತರ ನೇರವಾಗಿ ಇಂದೀಕರಣಗೊಂಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳತಕ್ಕದ್ದು.
8) ಈ ಆದೇಶವನ್ನು ಹಾಗೂ ಈ ಆದೇಶಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗುವ ಸುತ್ತೋಲೆ, ಇತರೆ ಆದೇಶಗಳನ್ನು ಮತ್ತು ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಸಂಬಂಧಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವೆಬ್ ಸೈಟ್‌ನಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.
9) ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸಲಾಗುವ ಎಲ್ಲಾ ಆದೇಶಗಳನ್ನು ಹಾಗೂ ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ವೆಬ್ ಸೈಟ್‌ನಲ್ಲಿ ಪ್ರಕಟಿಸತಕ್ಕದ್ದು.
10) ಪ್ರಸ್ತುತ ಎರಡನೇ ತ್ರೈಮಾಸಿಕ ಕಂತಿನ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಮೂರನೇ ತ್ರೈಮಾಸಿಕ ಕಂತಿನ ಅನುದಾನ ಬಿಡುಗಡೆಗೂ ಮುನ್ನ ಕಡ್ಡಾಯವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪಯೋಗಿತಾ ಪ್ರಮಾಣ ಪತ್ರ (Utilisation certificate), ಅನುದಾನ ಬಳಕೆಯ ವಿವರ ಮತ್ತು ಬೇಡಿಕೆ ಅನುದಾನಕ್ಕಾಗಿ ಪ್ರಸ್ತಾವನೆಗೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇವರಿಗೆ ಸಲ್ಲಿಸತಕ್ಕದ್ದು, ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರು.
ಉಪಯೋಗಿತಾ ಪ್ರಮಾಣ ಪತ್ರವನ್ನು ಪರಿಶೀಲಿಸಿ, ವೆಚ್ಚದ ವಿವರಗಳನ್ನು ಕ್ರೋಡೀಕರಿಸಿ ಎರಡನೇ ತ್ರೈಮಾಸಿಕ ಅವಧಿಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲು ಸಲ್ಲಿಸಲಾಗುವ ಪ್ರಸ್ತಾವನೆಯೊಂದಿಗೆ ಸಲ್ಲಿಸತಕ್ಕದ್ದು.
11) ಈ ಆದೇಶದಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸೂಕ್ತ ಲೆಕ್ಕ ಪತ್ರವನ್ನು ಇಡತಕ್ಕದ್ದು ಮತ್ತು ಇದರ ಮೇಲ್ವಿಚಾರಣೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನಿರ್ವಹಿಸತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 350 ವೆಚ್ಚ-8/ 2025 ದಿನಾಂಕ: 23.04.2025 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್.ಡಿ 02 ಟಿಎಫ್‌ಪಿ 2025, ದಿನಾಂಕ: 30.06.2025ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.






