Home » ಲೈವ್ ನ್ಯೂಸ್ » ಜಿಲ್ಲಾ ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.06.ಜನವರಿ.26:- ರಾಯಚೂರು ಕೃವಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ, 2026ನೇ ಜನವರಿಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯರನ್ನು ಗುರುತಿಸಿ ಕೃಷಿ ಮೇಳದಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ನೀಡಲು ಗೌರವಾಗಿಸಲಾಗುವುದು.

ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಬೀದರದಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಕೃಷಿ ವಿಜ್ಞಾನ ಕೇಂದ್ರ ಬೀದರ ಇಲ್ಲಿಗೆ ದಿನಾಂಕ: 16-01-2026 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ ಬೀದರ ದೂರವಾಣಿ ಸಂಖ್ಯೆ: 08482-244178, 9480696318 ಗೆ ಸಂಪರ್ಕಿಸಬಹುದಾಗಿದೆ ಎಂದು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology