ಚಾಮರಾಜನಗ.08.ಜುಲೈ.25:- ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಯಿತು. ಜಿಲ್ಲೆಯಲ್ಲಿ ಒಬ್ಬರು ಮಾತ್ರ ರೇಡಿಯಾಲಜಿಸ್ಟ್ ಇರುವುದರಿಂದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ (ಸಿಮ್ಸ್) ರೋಗಿಗಳಿಗೆ MRI ಸೇವೆ ಸಮರ್ಪಕವಾಗಿ ದೊರೆಯತ್ತಿಲ್ಲ ಎಂಬ ವಿಚಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ ಸಿಮ್ಸ್‌ನಲ್ಲಿ ಎಂಆರ್‌ಐ ಸೇವೆ ಪಡೆಯಲು ರೋಗಿಗಳು ಒಂದು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಾಗಿದೆ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಸರ್ಜನ್ ಮಹೇಶ್ ‘ರೇಡಿಯಾಲಜಿಸ್ಟ್ ಕೊರತೆಯಿಂದ ಎಂಆರ್‌ಐ ಸೇವೆಯಲ್ಲಿ ವ್ಯತ್ಯಯವಾಗಿದೆ. ಓರ್ವ ರೇಡಿಯಾಲಜಿಸ್ಟ್ ಪ್ರತಿದಿನ 200ಕ್ಕೂ ಹೆಚ್ಚು ರೋಗಿಗಳ ವರದಿ ವಿಶ್ಲೇಷಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಧ್ಯೆ ಪ್ರವೇಶಿಸಿದ ಡಿಎಚ್‌ಒ ಡಾ.ಚಿದಂಬರ ‘ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ರೇಡಿಯಾಲಜಿಸ್ಟ್ ಹುದ್ದೆಗಳು ಖಾಲಿ ಇವೆ. ಪ್ರತಿಬಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದರೂ ರೇಡಿಯಾಲಜಿಸ್ಟ್‌ಗಳು ಅರ್ಜಿ ಸಲ್ಲಿಸುತ್ತಿಲ್ಲ. ಅಕ್ಕಪಕ್ಕದ ಜಿಲ್ಲೆಗಳಿಂದ ಅರ್ಜಿ ಹಾಕಲು ಅವಕಾಶ ನೀಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ.ವೆಂಕಟೇಶ್ ಮಾತನಾಡಿ, ಕಳೆದ ವರ್ಷ ಜಿಲ್ಲೆಯ ಹಾಡಿಗಳಲ್ಲಿ ಗರ್ಭಿಣಿಯರಿಗೆ ಮನೆಯಲ್ಲೇ ಹೆರಿಗೆಯಾಗಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ತಾಯಿ ಹಾಗೂ ಮಗುವಿನ ಹಿತದೃಷ್ಟಿಯಿಂದ ಮನೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಹಾಡಿಗಳಲ್ಲಿ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಬೇಕು. ಹೆರಿಗೆಗೆ ಒಂದುವಾರ ಮುಂಚಿತವಾಗಿ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಬೇಕು ಎಂದು ಡಿಎಚ್‌ಒಗೆ ಸೂಚನೆ ನೀಡಿದರು.
ಕಳೆದ ವರ್ಷ ಹನೂರು ತಾಲ್ಲೂಕಿನಲ್ಲಿ ಹೆರಿಗೆ ವೇಳೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದು ಈ ವರ್ಷ ಯಾವುದೇ ಸಾವು ಸಂಭವಿಸಿಲ್ಲ. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು. ಕಳೆದ ವರ್ಷ ಅವಧಿಪೂರ್ಣ ಜನಿಸಿದ 136 ಶಿಶುಗಳು ಸಾವನ್ನಪ್ಪಿದ್ದು, ಪ್ರಸಕ್ತ ವರ್ಷ ಮರಣ ಪ್ರಮಾಣವನ್ನು ತಗ್ಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ತಾಯಿ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ ನೀಡಿದರು.
ಕಾಡು ಪ್ರಾಣಿಗಳ ಹಾವಳಿ ತಡೆ, ಬೆಳೆಹಾನಿಗೆ ತುರ್ತು ಪರಿಹಾರ ನೀಡಬೇಕು, ಚಿರತೆ ಕಾಣಿಸಿಕೊಂಡರೆ ತಕ್ಷಣ ಸೆರೆ ಕಾರ್ಯಾಚರಣೆ ಆರಂಭಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಸೇವೆ ಸಮರ್ಪಕವಾಗಿರಬೇಕು, ಹೋಟೆಲ್, ಬೇಕರಿ, ರೆಸ್ಟೋರೆಂಟ್‌ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು.
ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಬೇಕು. ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಚಿವರು ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಮಾತನಾಡಿ, ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಬೇಕು. ಶಾಲೆಗಳ ನಿರ್ಮಾಣಕ್ಕೆ ದಾನ ನೀಡಿರುವ ನಿವೇಶನ, ಕಟ್ಟಡಗಳನ್ನು ಶಿಕ್ಷಣ ಇಲಾಖೆಯ ಹೆಸರಿಗೆ ಖಾತೆ ಮಾಡಿಸಿಕೊಳ್ಳಬೇಕು ಎಂದರು.
ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ‘ಕೊಳ್ಳೇಗಾಲದಲ್ಲಿ ಅಬ್ದುಲ್ ಕಲಾಂ ಸಂಸ್ಥೆಯ ಅವ್ಯವಹಾರ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.
ಶಾಸಕರಾದ ಎಂ.ಆರ್.ಮಂಜುನಾಥ್ ಮಾತನಾಡಿ, ಜೆ.ಜೆ.ಎಂ ಕುಡಿಯುವ ನೀರಿನ ಕಾಮಗಾರಿ ತಡವಾಗುತ್ತಿದ್ದು, ಕೆಲವು ಕಡೆ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಕೂಡಲೇ ಕಾಮಗಾರಿ ಮುಗಿಸಿ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅದ್ಯಕ್ಷ ಎಚ್.ವಿ.ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್, ಎಸ್‌ಪಿ ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಇದ್ದರು.
ಡಯಾಲಿಸಿಸ್ ಯಂತ್ರಕ್ಕೆ ಅನುದಾನ ಕೊಡಿ
ಚಾಮರಾಜನಗರ ಗುಂಡ್ಲುಪೇಟೆ ಯಳಂದೂರು ಕೊಳ್ಳೇಗಾಲ ಹಾಗೂ ರಾಮಾಪುರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿದ್ದು ಪ್ರತಿದಿನ 126 ರೋಗಿಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದಾರೆ. ಯಂತ್ರಗಳ ಕೊರತೆಯಿಂದ ಪ್ರತಿದಿನ 16 ರೋಗಿಗಳು ಡಯಾಲಿಸಿಸ್‌ಗೆ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ಡಿಎಚ್‌ಒ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶಾಸಕರು ಅವರವರ ಕ್ಷೇತ್ರದಲ್ಲಿ ಡಯಾಲಿಸಿಸ್ ಕೇಂದ್ರಗಳ ಸ್ಥಾಪನೆಗೆ ಅನುದಾನ ನೀಡಿದರೆ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು. ಎಲ್ಲ ಶಾಸಕರು ಒಪ್ಪಿಗೆ ಸೂಚಿಸಿದರು.
ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…