ಬೀದರ.20.ಜೂನ್25:- ಬೀದರ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ತಡೆಗಟ್ಟುವ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು ಅವುಗಳನ್ನು ತಡೆಯುವ ಕೆಲಸ ಸಂಬAಧಿಸಿದAತೆ ಅಧಿಕಾರಿಗಳು ಮಾಡಬೇಕು ಹಾಗೂ ಬಾಲ್ಯ ವಿವಾಹ ಮಾಡುತ್ತಿರುವ ಪೋಷಕರು, ಪೂಜಾರಿಗಳು, ಕಲ್ಯಾಣ ಮಂಟಪ ಮಾಲಿಕರು ಮತ್ತು ಆಮಂತ್ರಣ ಪತ್ರಿಕೆ ಅಂಗಡಿಯ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಮದುವೆ ವಯಸ್ಸಿಗೆ ಸಂಬಧಿಸಿದತೆ ಬರ್ತ್ ಸರ್ಟಿಫಿಕೇಟ್, ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಅಥವಾ ವೈದ್ಯಕೀಯ ವಯಸ್ಸು ಪರೀಕ್ಷೆ ಪತ್ರ ಮಾತ್ರ ಪರಿಗಣಿಸಬೇಕು ಎಂದರು. ಶಾಲೆ ಬಿಟ್ಟ ಬಾಲಕಿಯರ ವಿವರವನ್ನು ಶಾಲಾ ಶಿಕ್ಷಣಾ ಇಲಾಖೆ ನೀಡಬೇಕು ಮತ್ತು ಶಾಲೆ ಬಿಡಲು ಕಾರಣ ಏನು ಎಂದು ತಿಳಿದುಕೊಳ್ಳಬೇಕು.
ಗ್ರಾಮ ಪಂಚಾಯಿತಿಯ ಕಾವಲು ಸಮಿತಿಯು ಕೂಡ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಂಡು ಬಂದಲ್ಲಿ ತಕ್ಷಣ ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದರು. ಏಪ್ರಿಲ್ 2024 ರಿಂದ ಮಾರ್ಚ್ 2025 ರವರಿಗೆ ಜಿಲ್ಲೆಯಲ್ಲಿ ಒಟ್ಟು 58 ಬಾಲ್ಯ ವಿವಾಹ ಪ್ರಕರಣಗಳಲ್ಲಿ 55 ಬಾಲ್ಯ ವಿವಾಹ ತೆಗೆಯಲಾಗಿದ್ದು 3 ಬಾಲ್ಯ ವಿವಾಹ ಜರಿಗಿವೆ ಅವುಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ ಮತ್ತು 2025 ರ ಏಪ್ರಿಲ್-ಮೇ ತಿಂಗಳಲ್ಲಿ ಒಟ್ಟು 31 ಬಾಲ್ಯ ವಿವಾಹವನ್ನು ತಡೆಯಲಾಗದೆ ಮತ್ತು ಯಾವುದೇ ಬಾಲ್ಯ ವಿವಾಹ ಜರುಗಿರುವುದಿಲ್ಲ ಎಂದರು.
ಜಿಲ್ಲೆಯಲ್ಲಿ 2024-2025ನೇ ಸಾಲಿನಲ್ಲಿ ಆರ್.ಸಿ.ಹೆಚ್ ಪೋರ್ಟಲ್ ನಲ್ಲಿ ನೋಂದಣಿಯಾದ ಬಾಲಗರ್ಭಿಣಿಯರ ಸಂಖ್ಯೆ 75 ಆಗಿದ್ದು ಇದನ್ನು ನಾವು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 37 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿವೆ ಆದ್ದರಿಂದ ಜನರಿಗೆ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಪೋಕ್ಸೋ ಪ್ರಕರಣದ ಹೆಣ್ಣು ಮಕ್ಕಳನ್ನು ಸಖಿ ಓನ್ ಸೆಂಟರ್ ಮೂಲಕ ಕೌನ್ಸಿಲಿಂಗ್ ಮಾಡಿ ಒಂದೇ ಸೂರಿನಡಿ ಸಹಾಯ ಮಾಡಲಾಗುವುದು ಎಂದರು. ಜಿಲ್ಲೆಯಲ್ಲಿ ಚಿಂದೋಡಿ ಆಯುವ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಕಾಪಾಡಿ ಅವರಿಗೆ ಶಾಲೆಗೆ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಡಿವಾಯ್‌ಎಸ್‌ಪಿ ಶಿವನಗೊಡ ಪಾಟೀಲ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…