ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ

ಬೀದರ.28.ಜೂನ್.25:-ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಕ್ಷೇತ್ರವು ಕಲುಷಿತಗೊಂಡಿರುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಬೀದರ ತೋಟಗಾರಿಕೆ ಮಹಾವಿದ್ಯಾಲಯವನ್ನು ತರಬೇತಿ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿರುತ್ತದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಯೋಜನೆಯ ಮುಖ್ಯ ಉದ್ದೇಶಗಳಾದ ಬಾಹ್ಯವಾಗಿ ಖರೀದಿಸುವ ಪರಿಕರಗಳ ಅವಲಂಬನೆಯನ್ನು ಕಡಿಮೆ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಕೆಯ ಮೂಲಕ ಪ್ರಕೃತಿ ಆಧಾರಿತ ಸುಸ್ಥೀರ ಕೃಷಿ ಪದ್ದತಿಗಳ ಉತ್ತೇಜನೆ, ಜಾನುವಾರು ಆಧಾರಿತ ಸಮಗ್ರ ಕೃಷಿ ಪದ್ದತಿಗಳ ಪ್ರಚಾರ, ನೈಸರ್ಗಿಕ ಕೃಷಿಯ ಹೆಚ್ಚಿನ ಅಳವಡಿಕೆ ಮತ್ತು ಹೆಚ್ಚಿನ ಪ್ರಚಾರಕ್ಕಾಗಿ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ನೈಸರ್ಗಿಕ ಕೃಷಿ ಪದ್ದತಿಗಳನ್ನು ಅಭಿವೃದ್ದಿಪಡಿಸಲು ಮತ್ತು ಸುಧಾರಿಸಲು ನೈಸರ್ಗಿಕ ಕೃಷಿ ನಿರತ ರೈತರ ಅನುಭವ ಹಾಗೂ ವೈಜ್ಞಾನಿಕ ಪರಿಣಿತಿಯನ್ನು ಒಟ್ಟುಗೂಡಿಸುವುದು.

ಪ್ರಸ್ತುತ ಕೃಷಿಯಲ್ಲಿ ರಾಸಾಯನಿಕ ಕೃಷಿಯಿಂದಾಗಿ ಭೂಮಿಯ ಫಲವತ್ತತೆ ಹಾಳಾಗುತ್ತಿದೆ. ಅಲ್ಲದೇ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಾರಂಭಿಸಿದೆ.

ರಾಸಾಯನಿಕ ಮುಕ್ತ ಕೃಷಿಯನ್ನು ಅಳವಡಿಸುವಂತೆ ರೈತರನ್ನು ಪ್ರೇರೆಪಿಸಲು ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಯ ಒಟ್ಟು 30 ಗುಚ್ಛಗಳಲ್ಲಿ 15 ಕಡಿಮೆ ರಾಸಾಯನಿಕ ಬಳಸುವ ಗುಚ್ಚಗಳು ಹಾಗೂ ಇನ್ನುಳಿದ 15 ಬಲವರ್ಧಿತ ಗುಚ್ಚಗಳು ಈPಔ/Sಊಉ/PಂಅS ಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. 3750 ರೈತರ ತಾಕುಗಳ ಒಂದು ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವ ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಪ್ರತಿ ಎಕರೆಗೆ 4000 ರೂ. ರಂತೆ ಪ್ರೋತ್ಸಾಹಧನ ನೀಡಲು ಅವಕಾಶವಿದೆ.


ನೈಸರ್ಗಿಕ ಕೃಷಿಗೆ ಬೇಕಾಗುವ ಜೈವಿಕ ಕೃಷಿ ಪರಿಕರಗಳಾದ ಬೀಜಾಮೃತ, ಜೀವಾಮೃತ ಘನ ಜೀವಾಮೃತ ಮತ್ತು ನೈಸರ್ಗಿಕ ಕೃಷಿಯ ಕೀಟನಾಶಕ / ರೋಗನಾಶಕಗಳ ಮುಂತಾದವುಗಳ ಪರಿಕರ ಉತ್ಪಾದನೆಗಾಗಿ 20 ಜೈವಿಕ ಪರಿಕರಗಳ ಸಂಪನ್ಮೂಲ ಕೇಂದ್ರಗಳನ್ನು ಗುರುತಿಸಲಾಗುವುದು.

ಈ ಜೈವಿಕ ಪರಿಕರ ಸಂಪನ್ಮೂಲಕಗಳ ಕೇಂದ್ರಗಳ ನಿರ್ವಹಣೆಗಾಗಿ 1.00 ಲಕ್ಷ ರೂ. ಸಹಾಯಧನ ನೀಡಲಾಗುವುದು ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಪ್ರತಿ ಗುಚ್ಛದಲ್ಲಿ ಎರಡು ಕೃಷಿ ಸಖಿಯರನ್ನು ನೇಮಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ 50 ಹೇಕ್ಟರ್ ಪ್ರದೇಶದ ಗುಚ್ಛ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

23 minutes ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

29 minutes ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

37 minutes ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

47 minutes ago

ಕಚ್ಚಾ ತೈಲ ಬೆಲೆ ಇಳಿಕೆ; ಬ್ರೆಂಟ್ ಮತ್ತು $66.31, WTI ಪ್ರತಿ ಬ್ಯಾರೆಲ್‌ಗೆ $63.53

ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…

55 minutes ago

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಸಂಸತ್ತು ಹಲವು ಬಾರಿ ಮುಂದೂಡಿಕೆ, 18 ರಂದು ಪುನರಾರಂಭ

ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…

58 minutes ago