ಜಿಲ್ಲೆಯಲ್ಲಿ ಹಸಿಶುಂಠಿ ಖರೀದಿ ಕೇಂದ್ರಗಳ ಸ್ಥಾಪನೆ:ರೈತಬಾಂಧವರು ಸದುಪಯೋಗ ಪಡೆದುಕೊಳ್ಳಲು ಮನವಿ

ಬೀದರ.23.ಏಪ್ರಿಲ್.25:-2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ರೈತರು ಬೆಳೆದಿರುವ  FAQ     ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲಿಗೆ 2,445-00 ರೂ. ದರದಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಬೆಂಗಳೂರು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶದನ್ವಯ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಬೀದರ ರವರ ಅಧ್ಯಕ್ಷತೆಯಲ್ಲಿ ದಿನಾಂಕ: 19-04-2025 ರಂದು ಜರುಗಿದ ಸಭೆಯ ನಡವಳಿಗಳ ಪ್ರಕಾರ ಬೀದರ ಜಿಲ್ಲೆಯಲ್ಲಿ ಒಟ್ಟು 05 ಖರೀದಿ ಕೇಂದ್ರಗಳನ್ನು  FAQ    ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ದರದಲ್ಲಿ ರೈತರಿಂದ ಖರೀದಿಸಲು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


_________ಹಸಿಶುಂಠಿ ಖರೀದಿ ಕೇಂದ್ರಗಳ ವಿವರ:__________

> ಬೀದರನ ತಾಲ್ಲೂಕಿನ ಮನ್ನಳ್ಳಿ,                                      

> ಭಾಲ್ಕಿ ತಾಲ್ಲೂಕಿನ ಭಾತಂಬ್ರಾ,

> ಬಸವಕಲ್ಯಾಣ ತಾಲ್ಲೂಕಿನ ಮುಡಬಿ,  

 > ಹುಮನಾಬಾದ ತಾಲ್ಲೂಕಿನ ದುಬಲಗುಂಡಿ.

> ಔರಾದ (ಬಾ) ತಾಲ್ಲೂಕಿನ ಜೋಜನಾ ಗ್ರಾಮಗಳ ಕೇಂದ್ರಗಳು ಪ್ರಾರಂಭಿಸಲಾಗಿದೆ.


ರಾಜ್ಯ ಸರ್ಕಾರ ಆದೇಶ ಹೊರಡಿಸಿದ ದಿನಾಂಕದಿoದ ರೈತರ ನೋಂದಣಿ ಕಾಲಾವಧಿಯನ್ನು ದಿನಾಂಕ: 27-04-2025ರ ವರೆಗೆ ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಜರುಗಿಸಲು ನಿಗಧಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 30 ಕ್ವಿಂಟಾಲ್‌ನoತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 60 ಕ್ವಿಂಟಾಲ್‌ನAತೆ  FAQ  ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳು ಲಾಗ್‌ಇನ್ ಕ್ರೆಡೆನ್ಸಿಯಲ್ಸ್ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ತಮ್ಮ ಹಸಿಶುಂಠಿ ಉತ್ಪನ್ನವನ್ನು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ\

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

7 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

8 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

8 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

8 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago