ಜಿಲ್ಲೆಯಲ್ಲಿ 118 ಸ್ಕ್ಯಾನಿಂಗ್ ಕೇಂದ್ರಗಳುಲಿಂಗ ಪರೀಕ್ಷೆ ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು


ಬೀದರ.29ಜನವರಿ.25:-ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಪ್ರಸವಪೂರ್ವ ಲಿಂಗ ಪರೀಕ್ಷೆ ವಿಧಾನ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೇ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ತಿಳಿಸಿದರು.


ಡಿಎಚ್‍ಓ ಕಚೇರಿ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪಿ.ಸಿ. ಹಾಗೂ ಪಿ.ಎನ್.ಡಿ.ಟಿ. ಕಾಯ್ದೆ 1994 (ಗರ್ಭಧಾರಣಾ ಹಾಗೂ ಪ್ರಸನ ಪೂರ್ವ ಪತ್ತೆ ತಂತ್ರ ವಿಧಾನಗಳ ಅಧಿನಿಯಮ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.


ಮೂರು ತಿಂಗಳಿಗೊಮ್ಮೆ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳಿಗೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೊಂಗ್ರೆ ನೇತೃತ್ವದಲ್ಲಿ ತಪಾಸಣೆ ನಡೆಸಲಾಗುತ್ತದೆ. ಪ್ರತಿ ಸ್ಕ್ಯಾನಿಂಗ್ ಕೇಂದ್ರವು ಅಗತ್ಯ ದಾಖಲಾತಿಗಳನ್ನು ಇಡಬೇಕಾಗುತ್ತದೆ.  ಒಟ್ಟು 72 ಕೇಂದ್ರಗಳಲ್ಲಿ ಗರ್ಭ ತಪಾಸಣೆ ನಡೆಸಲಾಗುತ್ತಿದೆ.

ಗರ್ಭಕ್ಕೆ ಯಾವುದಾದರೂ ಲೋಪದೋಷ ಇರುವ ಬಗ್ಗೆ ತಪಾಸಣೆಗೆ ಒಳಪಡುವ ಮಹಿಳೆಯ ಎಲ್ಲ ವಿವರದ ರಜಿಸ್ಟರ್, ನಾಲ್ಕು ಕಾಲಂ ರಜಿಸ್ಟರ್, ಬಿಲ್ ಬುಕ್ ಕಡ್ಡಾಯವಾಗಿ ಇಡಬೇಕಾಗುತ್ತದೆ. ಕೆಲವೆಡೆ ಸಣ್ಣ ಪಟ್ಟ ಲೋಪದೋಷ ಕಂಡುಬಂದವರಿಗೆ ನೋಟೀಸ್ ಈಗಾಗಲೇ ನೀಡಲಾಗಿದೆಯೆಂದು ಸಭೆಗೆ ತಿಳಿಸಲಾಯಿತು.


ಗ್ರಾಮೀಣ ಪ್ರದೇಶದಲ್ಲಿ ಅನೇಕ ಲಂಬಾಣಿ ತಾಂಡಾಗಳಿದ್ದು, ಬಗದಲ್ ಹೊನ್ನಿಕೇರಿ ಅಂತಹ ತಾಂಡಾಗಳಲ್ಲಿ ಗಂಡು, ಹೆಣ್ಣು ಅನುಪಾತ ತೀರ ಕಡಿಮೆ ಇದೆ, ಹೆಣ್ಣು ಅನುಪಾತ ತೀರ ಕುಸಿತದ ಬಗ್ಗೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸಬೇಕೆಂದು ಜಿಲ್ಲಾ ತಪಾಸಣಾ ಹಾಗೂ ಪರಿಶೀಲನಾ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರಾದ ವಕೀಲರಾದ ಉಮೇಶ ಪಾಂಡ್ರೆ ಸಭೆಯ ಗಮನಕ್ಕೆ ತಂದರು. 

ಆಶಾ ಕಾರ್ಯಕರ್ತೆಯರು ಪ್ರತಿ ಗರಾಮದಲ್ಲಿ ಗರ್ಭಿಣಿ ಮಹಿಳೆಯರ ಬಗ್ಗೆ ನಿಗಾ ವಹಿಸಬೇಕು. ಭ್ರೂಣ ಹತ್ಯೆ ಲಿಂಗ ತಪಾಸಣೆ ನಿಷೇಧ ಬಗ್ಗೆ ಗರ್ಭಿಣಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕಾ ಮಟ್ಟದಲ್ಲಿ ಸಭೆ ನಡೆಸುವಂತೆ ಡಿಎಚ್‍ಓ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲೆಯಲ್ಲಿ ಉತ್ತಮ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಬಗ್ಗೆ ರಾಜ್ಯ ಮಟ್ಟದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನಿಂದ ಚೈತನ್ಯಶ್ರೀ ಪ್ರಶಸ್ತಿ ಪಡೆದ ಡಿ.ಎನ್.ಡಿ.ಟಿ. ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾಗಿರುವ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಆರತಿ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.


ಮಕ್ಕಳ ತಜ್ಞ ಡಾ.ಸೋಹೆಲ್, ರೆಡಿಯೋಲಾಜಿಸ್ಟ್, ಡಾ.ಅಮಿತ ಶಾಹ, ಮಲಿಕಾರ್ಜುನ, ಮಂಜುಳಾ ಮಾಳೆ, ವಿನಯಕುಮಾರ ಮಾಳಗೆ ಸಭೆಯಲ್ಲಿ ಪಾಲ್ಗೊಂಡಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …

3 hours ago

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…

4 hours ago

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…

4 hours ago

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

8 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

19 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

1 day ago