ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಕೃಷಿ ಹೊಂಡ ನಿರ್ಮಿಸಿ-ಸಚಿವ ಈಶ್ವರ ಖಂಡ್ರೆ

ಬೀದರ.25.ಮಾರ್ಚ.25: ರೈತರಿಗೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾವಿರಾರು ಕೃಷಿ ಹೊಂಡಗಳನ್ನು ನಿರ್ಮಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಬಡ, ಮಧ್ಯಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೃಷಿಕರಿಗೆ ಅನುಕುಲವಾಗುವ ನಿಟ್ಟಿನಲ್ಲಿ ಸರಕಾರದ ಅನುದಾನವನ್ನು ಬಳಸಿ ಜಿಲ್ಲೆಯಾದ್ಯಂತ ಪ್ರತಿವರ್ಷ ಒಂದು ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ ಅವರಿಗೆ ತಿಳಿಸಿದರು.

ರೈತ ಸಂಪರ್ಕ ಕೇಂದ್ರ ಅಧಿಕಾರಿಗಳು, ಜಲಾನಯನ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಿಯಶೀಲರಾಗಿ ರೈತರಲ್ಲಿ ಜಾಗೃತಿ ಮೂಡಿಸಿ ರೈತರ ಜಮೀನಿನಲ್ಲಿ ಹೆಚ್ಚಿನ ಕೃಷಿ ಹೊಂಡಗಳನ್ನು ನಿರ್ಮಿಸಬೇಕೆಂದು ಸಚಿವರು ತಿಳಿಸಿದರು. ಮಳೆ ಕಡಿಮೆಯಾಗಿ ನೀರಿನ ಅಭಾವವಾದಲ್ಲಿ ನೀರು ಸಂಗ್ರಹಣೆಗೆ ರೈತರಿಗೆ ಅನುಕೂಲವಾಗುತ್ತದೆಂದರು. ಈ ವರ್ಷ 334 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ತೊಗರಿ ಬೆಳೆ ಹಾನಿ: ಪಕ್ಕದ ಕಲ್ಬುರ್ಗಿ ಜಿಲ್ಲೆಯಲ್ಲಿ ನೆಟ್ಟೆ ರೋಗದಿಂದ ತೊಗರಿ ಬೆಳೆಗೆ ಸಾಕಷ್ಟು ಹಾನಿಯಾಗಿದ್ದು, ಬೀದರ ಜಿಲ್ಲೆಯಲ್ಲಿ ಒಣ ಬೇರು ರೋಗದಿಂದಾಗಿರುವ ಹಾನಿ (ಆಡಿಥಿ ಡಿooಣ ಡಿoಣ) ಬಗ್ಗೆ ತಕ್ಷಣವೇ ವರದಿ ಸಲ್ಲಿಸುವಂತೆ ಕೃಷಿ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

70 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಭವಿಸುವ ಹಿನ್ನಲೆಯಲ್ಲಿ: ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಿಯಾದರೂ ಸಮಸ್ಯೆ ಕಂಡು ಬಂದಲ್ಲಿ 24 ಗಂಟೆಗಳಲ್ಲಿ ಬಗೆಹರಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

ಔರಾದ್ ತಾಲ್ಲೂಕಿನ ರಕ್ಷಾಳ ಹಾಗೂ ಕರ್ಕಿಹಾಳ ಗ್ರಾಮ, ಭಾಲ್ಕಿ ತಾಲ್ಲೂಕಿನ ಜೈನಾಪುರ ಹಾಗೂ ಧಾರಜವಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ ಬಗ್ಗೆ ಗ್ರಾಮಸ್ಥರು ತಮಗೆ ಅಹವಾಲು ನೀಡಿದ ತಕ್ಷಣವೇ ಬಗೆಹರಿಸುವಂತೆ ಸಚಿವರು ತಿಳಿಸಿದರು.

ಸಧ್ಯ 70 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಭವಿಸುವ ಮುನ್ನೆಚ್ಚರಿಕೆಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಮಲನಗರದ ಐದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದೆಡೆ ಕೊಳವೆ ಬಾವಿಗಳನ್ನು ಸಹ ಬಳಸಲಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಪತ್ರಿಕೆಗಳ ವರದಿಗೆ ಸ್ಪಂದಿಸಿ: ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಸಮಸ್ಯೆಯಾತ್ಮಕ ವರದಿಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸಮಸ್ಯೆಯನ್ನು ಪರಿಶೀಲಿಸಿ ಬಗೆಹರಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಆರಂಭವಾಗಿದ್ದು, ಈ ಬಾರಿ ಉತ್ತಮ ಫಲಿತಾಂಶ ಬರುವ ನಿರೀಕ್ಷೆಯಲ್ಲಿ ಅದಿಕಾರಿಗಳು ಇದ್ದಾರೆ. ಶೇ. 70 ರಷ್ಟು ಬರಲಿದೆಯೆಂದು ಸಚಿವರು ಆಶಿಸಿದರು.

ಕೆ.ಕೆ.ಆರ್.ಡಿ.ಬಿಯ ಮೈಕ್ರೋ ಹಾಗೂ ಮ್ಯಾಕ್ರೊ ಅನುದಾನದ ಕಾಮಗಾರಿಗಳಲ್ಲಿ ಗುಣಮಟ್ಟದ ಕಾಪಾಡುವಂತೆ ಸಚಿವರು ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎA.ವಾನತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

9 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

9 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

9 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

10 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

12 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

12 hours ago