ಜಿ 3 ರಂದು UGC NET, JEE ಪರೀಕ್ಷೆ :  ನಿಯಮಗಳ ಪಾಲನೆ ಕಡ್ಡಾಯ.!

ವಿಶ್ವವಿದ್ಯಾಲಯ ಅನುದಾನ ಆಯೋಗ ಹಾಗೂ ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜನೆವರಿ.03 ರಿಂದ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್,  ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.

ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳAದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.


ಪರೀಕ್ಷಾ ಮುನ್ನ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಎಲ್ಲಾ ಅಭ್ಯರ್ಥಿಗಾಳಿಗೆ ವಿಷೇಶ ಮಾಹಿತಿ ಪರೀಕ್ಷಾ ಕೇಂದ್ರಕ್ಕೆ ತೆರಳಿ, ಸೂಕ್ತ ರೀತಿಯ ಪ್ರವೇಶಪತ್ರ ಮತ್ತು ವಿಷೇಶ ಗುರುತಿನ್ ಚಿಟ್ಟಿ ಜೊತೆಯಲ್ಲಿ ಇರ್ಬೇಕು..

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

8 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

8 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

8 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago