ಜುಲೈನಿಂದ ಅನರ್ಹರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ‘ಗ್ಯಾರಂಟಿ’ ಬಂದ್

ಕೊಪ್ಪಳ.28.ಮೇ.25:- ರಾಜ್ಯದಲ್ಲಿ ಗೃಹ ಲಕ್ಷಮಿ ಮತ್ತು ವಿವಿಧ ಭಾಗ್ಯಗಳು ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ನೀನೆ ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕುಕನೂರು, ಯಲಬುರ್ಗಾ ತಾಲೂಕಿನ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳಲ್ಲಿ ಅನರ್ಹ ಅನುಭವಿಗಳಿಗೂ ಯೋಜನೆಯ ಲಾಭ ಹೋಗುತ್ತಿದೆ. ಇದನ್ನು ತನಿಖೆ ನಡೆಸಿ ಕಡಿವಾಣ ಹಾಕುವ ಮೂಲಕ ಜುಲೈನಿಂದ ಲಾಭ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಲ್ಲಿ ಅಂದಾಜು 250 ಕೋಟಿ ರೂಪಾಯಿ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿದೆ. ಆದರೆ, ಅರ್ಹರಲ್ಲದವರು ಸಹ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿದ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಮನೆ ಬಾಡಿಗೆ ನೀಡಿದ್ದರೂ ಸಹ ಅವರಿಗೆ ಉಚಿತ ಗೃಹ ಜ್ಯೋತಿ ಯೋಜನೆ ದೊರೆಯುತ್ತಿದೆ. ಗೃಹಲಕ್ಷ್ಮಿಯಲ್ಲಿ ತೆರಿಗೆ, ಜಿಎಸ್‌ಟಿ ಪಾವತಿಸುವ ಕುಟುಂಬ ಸದಸ್ಯರಿಗೆ ಹಣ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಯಲಬುರ್ಗಾ ಕ್ಷೇತ್ರದಲ್ಲಿ ಪಡಿತರ ಚೀಟಿಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಕುರಿತಂತೆ ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಯೋಜನೆಯ ಲಾಭ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

35 minutes ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago