Home » ಲೈವ್ ನ್ಯೂಸ್ » ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್

ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್

Facebook
X
WhatsApp
Telegram

ಕೊಪ್ಪಳ.09.ಜುಲೈ 26: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್‌ಇಂಟರ್‌ವ್ಯೂವನ್ನು ಜುಲೈ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.


ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಬಹುದು. 18 ರಿಂದ 25 ವರ್ಷದ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು  https://forms.gle/6yCAARAw8q2TiX8U8  ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology