ಬೀದರ.09.ಜುಲೈ.25:- ಇದೇ ಜುಲೈ.10 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಛೇರಿಗಳಲ್ಲಿ ಕಡ್ಡಾಯವಾಗಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ತಿಳಿಸಿದರು.
ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ರಥ ಮೆರವಣಿಗೆ ಮೂಲಕ ಶಿವಾಜಿ ವೃತ್ತ, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕಾರಿಯಪ್ಪ ವೃತ್ತದಿಂದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರ ತಲುಪಿ 11.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ಜಯಂತಿಯಲ್ಲಿ 3 ಕಲಾತಂಡಗಳು ಇರಲಿದ್ದು, ಕುಡಿಯುವ ನೀರು, ಪೆÇೀಲಿಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಸಂಗಮೇಶ ಹುಳಕೊಡ, ಪ್ರದೀಪ್ ಹಡಪದ, ಶರಣಪ್ಪ, ಪ್ರಭಾಕರ, ತರನಳ್ಳಿ, ದತ್ತು ಬಾಂದೆಕರ್, ರವೀಂದ್ರ ಡಿಗ್ಗಿ ಸೇರಿದಂತೆ ಸಮಾಜದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…