Home » ಲೈವ್ ನ್ಯೂಸ್ » ಜುಲೈ 12 ರ ಭಾನುವಾರ ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ

ಜುಲೈ 12 ರ ಭಾನುವಾರ ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ

Facebook
X
WhatsApp
Telegram

ರಾಜ್ಯಾದ್ಯಂತ ಜುಲೈ 12 ರ ಭಾನುವಾರ ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ – ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ

ಬೀದರ.11.ಜುಲೈ 26:- ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು (Sub-Registrar Offices) 2026 ನೇ ಜುಲೈ 12ರ ಭಾನುವಾರದಂದು ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.


ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology