ಜುಲೈ 27ಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಪ್ರವಾಸ.

ರಾಯಚೂರು.25.ಜುಲೈ.25: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 27ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.


ಅಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಲಿಂಗಸುಗೂರಿಗೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ಲಿಂಗಸುಗೂರು ಪಟ್ಟಣದ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ರಾಯಚೂರು ಹಾಗೂ ವಾರ್ತಾ ಮತ್ತು ಸಂಪರ್ಕ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.


ಮಧ್ಯಾಹ್ನ 2.30ಕ್ಕೆ, ಲಿಂಗಸುಗೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಲಿಂಗಸುಗೂರು ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5.30ಕ್ಕೆ ಲಿಂಗಸುಗೂರಿನಿAದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

3 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

3 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

3 hours ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

4 hours ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

4 hours ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

4 hours ago