ಕೊಪ್ಪಳ.05.ಜುಲೈ 25: 2025ನೇ ಸಾಲಿನ “ವಿಶ್ವ ಪ್ರಾಣಿಜನ್ಯ ರೋಗ ದಿನಾಚರಣೆ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕೊಪ್ಪಳ ಪಾಲಿಕ್ಲಿನಿಕ್ ವತಿಯಿಂದ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವು ಜುಲೈ 7 ರಿಂದ ಆಗಸ್ಟ್ 6 ರವರೆಗೆ ಒಂದು ತಿಂಗಳ ಕಾಲ ಜಿಲ್ಲಾ ಪಾಲಿಕ್ಲಿನಿಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ಹಾಕಿಸಬೇಕು ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಾಲಿಕ್ಲಿನಿಕ್ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
