ಜು. 11 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
ಕೊಪ್ಪಳ.08.ಜುಲೈ.25:- ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಜುಲೈ 11 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಪಾಲ್ಗೊಂಡು, ತಮ್ಮಲ್ಲಿ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
18 ರಿಂದ 30 ವರ್ಷದೊಳಗಿನ ಎಸ್.ಎಸ್.ಎಲ್.ಸಿ., ಪಿಯುಸಿ, ಯಾವುದೇ ಪದವಿ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

