04/08/2025 10:50 AM

Translate Language

Home » ಲೈವ್ ನ್ಯೂಸ್ » ಜು. 18ರಂದು ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ
ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಅರಿವು ಕಾರ್ಯಕ್ರಮ

ಜು. 18ರಂದು ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ
ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಅರಿವು ಕಾರ್ಯಕ್ರಮ

Facebook
X
WhatsApp
Telegram

ಕೊಪ್ಪಳ.16.ಜುಲೈ.25:- ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಜುಲೈ 18 ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಹಾಗೂ ಸೌಲಭ್ಯಗಳ ವಿತರಣೆ ಮಾಡುವರು. ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮನಗೌಡ ಪಾಟೀಲ್ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅವರು ಘನ ಉಪಸ್ಥಿತರಿರುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾಗ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ್ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು.


ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಎನ್.ವಿ ಪ್ರಸಾದ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್‌ರಾಜ್, ಕಾರ್ಮಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಕಾರ್ಮಿಕ ಇಲಾಖೆ ಆಯುಕ್ತರು ಹಾಗೂ ಕಾರ್ಮಿಕರ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಸೇವೆಗಳ ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್.ಗೋಪಾಲಕೃಷ್ಣ, ಕ.&ಇ.ನಿ.ಕಾ.ಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ., ಸಾರಿಗೆ ಮತ್ತು ರಸ್ತೆ ಸುರಕ್ಷತೆ ಸಾರಿಗೆ ಇಲಾಖೆ ಆಯುಕ್ತರಾದ ಯೋಗೀಶ್ ಎ.ಎಂ., ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮತ್ತು ಕ.ರಾ.ಅ.ಕಾ.ಸಾ.ಭ ಮಂಡಳಿಯ ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಡಾ. ಎಸ್.ಬಿ ರವಿಕುಮಾರ ಅವರು ಭಾಗವಹಿಸುವರು.


ಕಾರ್ಯಕ್ರಮದಲ್ಲಿ ಕಲಬುರ್ಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ಡಾ. ವೆಂಕಟೇಶ ಶಿಂಧಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತರಾದ ಮಹ್ಮದ್ ಬಶೀರ್ ಅನ್ಸಾರಿ, ಕೊಪ್ಪಳ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ, ಕಾರ್ಮಿಕ ನಿರೀಕ್ಷಕರಾದ ಕೊಪ್ಪಳ ವೃತ್ತದ ಮಂಜುಳಾ ವಿಶ್ವನಾಥ, ಗಂಗಾವತಿ ವೃತ್ತದ ಎಂ.ಅಶೋಕ ಹಾಗೂ ಕುಷ್ಟಗಿ ವೃತ್ತದ ನಿವೇದಿತಾ ಮತ್ತು ಕೊಪ್ಪಳ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು, ಕಾರ್ಮಿಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!