ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ

ಕೊಪ್ಪಳ.18.ಜುಲೈ.25: ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಗಂಗಾವತಿಯ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುಮ್ತಾಜ್ ಬೇಗಂ ಅವರು ಹಡಪದ ಅಪ್ಪಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

16 hours ago