ಬೀದರ.24.ಜುಲೈ.25:- ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ.27 ರಂದು ಬೆಳಿಗ್ಗೆ 11 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರ ಬೀದರನಲ್ಲಿ 2021-22ನೇ ಸಾಲಿನ ರಂಗಗೀತೆಗಾಯನ ಹಾಗೂ ರಮಾಬಾಯಿ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟಕರಾಗಿ ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಸುರೇಖಾ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿ ಬೆಂಗಳೂರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಅಧ್ಯಕ್ಷತೆ ಕರ್ನಾಟಕ ರಂಗಾಯಣ ಕಲಬುರಗಿ ನಿರ್ದೇಶಕರಾದ ಸುಜಾತಾ ಜಂಗಮಶೆಟ್ಟಿ, ವಿಶೇಷ ಉಪನ್ಯಾಸಕರಾಗಿ ಸಂಗ್ರಾಮ ಎಂಗಳೆ ಹಿರಿಯ ರಂಗಕರ್ಮಿಗಳು ಬೀದರ.
ಮುಖ್ಯ ಅತಿಥಿಗಳಾಗಿ ಬಸವರಾಜ ಹೂಗಾರ ಜಂಟಿ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಲಬುರಗಿ ವಿಭಾಗ ಕಲಬುರಗಿ, ಸುರೇಶ ಚನ್ನಶೆಟ್ಟಿ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಬೀದರ ಡಾ. ಸಂಜೀವಕುಮಾರ ಅತಿವಾಳೆ ಸದಸ್ಯರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ವಿಜಯಕುಮಾರ ಸೋನಾರೆ ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು, ಮಹೇಶ ಪಾಟೀಲ ಮಾಜಿ ನಿರ್ದೇಶಕರು ಕರ್ನಾಟಕ ರಂಗಾಯಣ ಕಲಬುರಗಿ, ಶಂಭುಲಿಂಗ ವಾಲ್ಡೊಡ್ಡಿ ಹಿರಿಯ ರಂಗಭೂಮಿ ಕಲಾವಿದರು ಬೀದರ, ಬಸವರಾಜ ಭತಮುರ್ಗೆ ಆಡಳಿತ ಮಂಡಳಿ ಸದಸ್ಯರು ಪಶು ವೈದ್ಯಕೀಯ ಮೀನುಗಾರಿಕೆ ವಿಶ್ವವಿದ್ಯಾಲಯ ಬೀದರ, ಬಿ.ಜೆ. ವಿಷ್ಣುಕಾಂತ ಚಲನಚಿತ್ರ ನಟರು ಹಾಗೂ ನಿರ್ದೇಶಕರು ಬೀದರ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರಣ ಸಾರ್ವಜನಿಕರು ನಾಟಕ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…