ಕೊಪ್ಪಳ.25.ಜುಲೈ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಜು. 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ
ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಫ್ಲಿಪ್ ಕಾರ್ಟ್ ಪ್ರೈ.ಲಿ (FLIP KART Private Limited) ಭಾಗವಹಿಸಲಿದ್ದು, ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಯಾವುದೇ ಪದವಿ ಅಭ್ಯರ್ಥಿಗಳು ಹಾಗೂ ಕೆಲಸದ ಅನುಭವವುಳ್ಳವರನ್ನು ಈ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಲಿಚ್ಛೀಸುವ 18 ರಿಂದ 35 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.