ಬೀದರ.28.ಜುಲೈ.25:- ಮಹಿಳೆಯ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾದ ಹಿನ್ನೆಲೆಯಲ್ಲಿ ಮಾನವ ಸಾಗಾಣಿಕೆಯನ್ನು ತಡೆಗಟ್ಟಲು ಮತ್ತು ಸಾಗಾಣಿಕೆಗೆ ಒಳಪಟ್ಟ ಮಹಿಳೆಯ ಮತ್ತು ಮಕ್ಕಳ ಪುನರ್ ವಸತಿ ಮಾಡುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿರುವುದ್ದರಿಂದ ವಿಶ್ವಸಂಸ್ಥೆ ಜುಲೈ-30ನ್ನು ಮಾನವ ಕಳ್ಳ ಸಾಗಾಣಿಕೆ ತಡೆ ದಿನವೆಂದು ಘೋಷಿಸಿರುತ್ತದೆ.
ಹಾಗಾಗಿ ಜುಲೈ.30 ರಂದು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿರುತ್ತಾರೆ.
ಭಾರತೀಯ ಸಂವಿಧಾನದಲ್ಲಿ ಶೋಷಣೆಯ ವಿರುದ್ಧದ ಹಕ್ಕು ಅನುಚ್ಚೇದ-23 ಮತ್ತು 24 ರಲ್ಲಿ ವಿವರಿಸಲಾಗಿದೆ. ಇದರ ಪ್ರಕಾರ ಮಾನವ ಕಳ್ಳ ಸಾಗಾಣಿಕೆ ಕಾನೂನಿನ್ವಯ ಶಿಕ್ಷಾರ್ಹ ಅಪರಾಧವಾಗಿದೆ. ಐಪಿಸಿ ಸೆಕ್ಷನ್ 370, (2) ಪ್ರಕಾರ ಕಳ್ಳ ಸಾಗಾಣಿಕೆಗೆ 7 ವರ್ಷಗಳಗಿಂತ ಕಡಿಮೆ ಇರಬಾರದು ಹಾಗೂ 10 ವರ್ಷಗಳ ವಿಸ್ತರಿಸಿ, ಜೈಲು ಶಿಕ್ಷೆ ಮತ್ತು ದಂಡ ಸಹ ವಿಧಿಸಲಾಗುತ್ತದೆ. ಐಪಿಸಿ ಸೆಕ್ಷನ್ 370, (3) ಪ್ರಕಾರ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ಕಳ್ಳ ಸಾಗಾಣಿಕೆ ಮಾಡಿದರೆ 10 ವರ್ಷಗಿಂತ ಕಡಿಮೆ ಇರಬಾರದು ಹಾಗೂ ಅದು ವಿಸ್ತರಿಸಿ, ಜೀವಾವಧಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜುಲೈ.30 ರಂದು ಬೀದರ ಜಿಲ್ಲೆಯ ಎಲ್ಲಾ ಹಂತದ ಸರಕಾರಿ ಕಚೇರಿಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಪ್ರತಿಜ್ಞಾ ವಿಧಿ ಕೈಗೊಳ್ಳಲು ಸೂಚನೆಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…