ಬೀದರ.17.ಜೂನ್.25:- ಇದೇ ಜೂನ್.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಒಂದು ಭೂಮಿ, ಒಂದು ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚಾರಿಸಲಾಗುತ್ತಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜೂನ್.13 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಜೂನ್.21 ರಂದು ಬೆಳಿಗ್ಗೆ 6:30 ರಿಂದ 8 ಗಂಟೆಯವರೆಗೆ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಜರುಗುತ್ತದೆ ಎಂದು ತಿಳಿಸಿದರು. ಹೈಸ್ಕೂಲ್, ಪಿಯುಸಿ, ಪದವಿ ಸೇರಿ 500 ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎನ್‌ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಬ್ರೀಮ್ಸ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಕೂಡ ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಪೋಲಿಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು ಹಾಗೂ ನಗರಸಭೆ ವತಿಯಿಂದ ಕುಡಿಯುವ ನೀರು, ಸ್ವಚ್ಛತೆಗೆ ಅಗತ್ಯ ಕ್ರಮಕೈಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಕೋವಿಡ್ 19 ರ ಮಾರ್ಗ ಸೂಚಿಗಳನ್ನು ಪಾಲನೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಖುತಿಜಾ ಬೇಗಂ, ಸರ್ಕಾರಿ ನೌಕರರ ಸಂಘ ಬೀದರ ಜಿಲ್ಲಾ ಘಟಕದ ಅಧ್ಯಕ್ಷರಾದ ಸೋಮಶೇಖರ ಬಿರಾದಾರ, ಕ್ರಿಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಮಠ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…