ಜೂ. 24ರಂದು ಉದ್ಯಮ ಶೀಲತಾಭಿವೃದ್ಧಿ ಕಾರ್ಯಕ್ರಮ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ., ವಿಜನ್ ಕರ್ನಾಟಕ ಫೌಂಡೇಶನ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ರವರ ಸಹಯೋಗದೊಂದಿಗೆ ಉದ್ಯಮ ಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಜೂನ್ 24ರಂದು ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗುತ್ತಿದೆ.

ಶಿಕ್ಷಣ ವಂಚಿತ ಯುವಕರು, ಐದಾರು ಜನ ಯುವಕರು ಸೇರಿ ಮಾಡಬಹುದಾದಂತಹ ಉದ್ಯಮಗಳು, ಸಂಘ-ಸಂಸ್ಥೆಗಳು ಅವರ ಸದಸ್ಯರಿಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಅವಕಾಶ, ಮಹಿಳೆಯರಿಗೆ ಸ್ವಯಂ ಉದ್ಯಮಗಳ ಮಾಹಿತಿ, ಸುಲಭವಾಗಿ ಬ್ಯಾಂಕ್ ಲೋನ್ ಪಡೆಯುವಲ್ಲಿ ವಿಕೆಫ್ ವತಿಯಿಂದ ಗ್ಯಾರಂಟಿ ಸಹಾಯ ಹಾಗೂ ಮಾರ್ಕೆಟಿಂಗ್ ಕುರಿತು ಮಾಹಿತಿ, ಉದ್ಯಮ ಸ್ಥಾಪನೆಗಾಗಿ ಲಭ್ಯವಿರುವ ಸಹಾಯಧನ ಸಬ್ಸಿಡಿ ಇನ್ನೀತರೆ ಆರ್ಥಿಕ ಸೌಲಭ್ಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳೊಂದಿಗೆ ನೇರವಾಗಿ ಮಾತನಾಡುವ ಅವಕಾಶ ಹಾಗೂ ಇನ್ನು ಹಲವು ಹೆಚ್ಚಿನ ಉದ್ಯಮ ಸಂಬಂಧಿತ ಪ್ರಶ್ನೆಗಳಿಗೆ ಸಂಶಯಗಳಿಗೆ ಉತ್ತರ ನೀಡಿ ತಮ್ಮ ಉದ್ಯಮವನ್ನು ಸ್ಥಾಪಿಸುವಲ್ಲಿ ನೆರವು ನೀಡುವ ಕಾರ್ಯಕ್ರಮವಾಗಿರುತ್ತದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಸಂಘಗಳು, ಮಂಡಳಿಗಳು ಮತ್ತು ಸಂಸ್ಥೆಗಳ ಸರ್ವ ಸದಸ್ಯರು ಹಾಗೂ ಯುವ ಜನತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲಾಗಿದೆ.

ಉದ್ಯಮ ಶೀಲತಾ ಅಭಿವೃದ್ಧಿ ಕಾರ್ಯಕ್ರಮವು ಒಂದು ದಿನದ ಕಾರ್ಯಾಗಾರವಾಗಿದ್ದು, ಭಾಗವಹಿಸಲು ಪ್ರವೇಶ ಉಚಿತವಾಗಿದ್ದು, ಭಾಗವಹಿಸಿದವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9379549304, 8539230121 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

2 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

2 hours ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

2 hours ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

2 hours ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

2 hours ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

3 hours ago