11/06/2025 12:13 PM

Translate Language

Home » ಲೈವ್ ನ್ಯೂಸ್ » ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧ. ರಾಜ್ಯ ಸರ್ಕಾರ.

ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧ. ರಾಜ್ಯ ಸರ್ಕಾರ.

Facebook
X
WhatsApp
Telegram

ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ.

ಬೆಂಗಳೂರು.10.ಜೂನ್.25:- ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ್ನ ನೀಡಲು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫಲಾನುಭವಿಗಳು ದಕ್ಷಿಣ ಕನ್ನಡ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಾಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆಯಡಿಯಲ್ಲಿ ನೋಂದಾಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ 6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ 5000/- ಮಾಸಿಕ ಗೌರವಧನ ನೀಡಲಾಗುವುದು. ಸಂಬಂದಪಟ್ಟ ಅರ್ಚಕರುಗಳು ಈ ಕೆಳಕಂಡ ದಾಖಲೆಯೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಮೊದಲನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ದಿನಾಂಕ ಜೂನ್ 26 2025 ರ ಒಳಗಾಗಿ ಸಲ್ಲಿಸುವುದು.

1. ಅರ್ಜಿಯೊಂದಿಗೆ ಅರ್ಚಕರು/ಗ್ರಂಥಿಗಳ ಭಾವಚಿತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಪ್ರತಿ

2. ಅರ್ಚಕರು/ಗ್ರಂಥಿಗಳು ಅವರ ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆಯ ಕುರಿತು ದಾಖಲೆ

3. ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ

4. ಸಂಸ್ಥೆಯವರು ಅರ್ಚಕರುಗಳ ಮಾಹೆವಾರು ಕರ್ತವ್ಯದ ಹಾಜರಾತಿ ಬಗ್ಗೆ ಹಾಗೂ ಸೇವಾ ಪ್ರಮಾಣ ಪತ್ರ ದೃಢೀಕರಣ ಪತ್ರವನ್ನು ನಿಗಧಿತ ನಮೂನೆಯಲ್ಲಿ ಸಲ್ಲಿಸುವುದು.

ಅರ್ಜಿ ನಮೂನೆ ಮತ್ತು ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಸಂಪರ್ಕಿಸುವುದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!