ಬೀದರ:10.ಜನವರಿ.25:- ಬೀದರ ಜಿಲ್ಲಾ ಉತ್ಸುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಜನತಾ ದರ್ಶನ ಕಾರ್ಯಕ್ರಮ ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ನಡೆಯಲಿದೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜನವರಿ.10 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.