ಜ.17 ರಿಂದ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳದ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

27.ಡಿ.24 ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶಿವ್ಯಾಧೆಕಿಯಿ ಹಾಗೂ ಮೀನುಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇ. ಜನವರಿ.17 ರಿಂದ 19 ರವರೆಗೆ ಪಶುವೈದ್ಯಕೀಯ ಪಶು ಹಾಗೂ ಮೀನುಗರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025 ದ ಸದುಪಯೋಗವನ್ನು ರೈತರು, ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.


ಈ ಮೇಳದಲ್ಲಿ ಜಾನುವಾರು ಮತ್ತು ಕುಕ್ಕಟ ತಳಿಗಳ ಪ್ರದರ್ಶನ, ಶ್ವಾನ ಪ್ರದರ್ಶನ, ಸಣ್ಣ ಮತ್ತು ಮುದ್ದು ಪ್ರಾಣಿ ಪಕ್ಷಿಗಳ ಪ್ರದರ್ಶನ, ಮೀನು ತಳಿಗಳು ಅಲಂಕಾರಿಕ ಮೀನುಗಳ ಪ್ರದರ್ಶನ, ಮಾದ್ಯವರ್ಧಿತ ಹಾಲು ಮತ್ತು ಹಾಲಿನ ಉತ್ಪನ್ನಗಳ ಪ್ರದರ್ಶನ, ವಿವಿಧ ಹೊಸ ತಂತ್ರಜ್ಞಾನಗಳ ಯಂತ್ರೋಪಕರಣಗಳ ಪ್ರದರ್ಶನ ಇರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಮೇಳದಲ್ಲಿ ರೈತರು ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.


ವಿವಿಧ ಇಲಾಖೆಗಳಿಂದ 15-20 ಮಳಿಗೆಗಳನ್ನು ನಿರ್ಮಿಸಿ ಎನ್.ಆರ್.ಎಲ್.ಎಂ. ಮತ್ತು ಮಹಿಳಾ ರೈತರಿಗೆ ಶಕ್ತಿ ಯೋಜನೆಯಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಹಾಗೂ ಗ್ರಾಮ ಪಂಚಾಯತಿಗಳಿಂದ ಹೆಚ್ಚಿನ ಪ್ರಚಾರ ನೀಡಿ ರೈತರಿಗೆ ಸೇರಿಸಬೇಕು. ಈ ಮೇಳದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಮತ್ತು ಶಾಲೆಗಳ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕೆಂದರು.


ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆಗಳ ವಿಶ್ವವಿದ್ಯಾಲಯ ಬೀದರನ ವಿಸ್ತರಣಾ ನಿರ್ದೇಶಕರಾದ ಡಾ.ಬಸವರಾಜು ಅವಟಿ ಅವರು ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳು ಮತ್ತು ಯುವಕರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಇದರ ಪ್ರಾಮುಖ್ಯತೆಗಳನ್ನು ವಿವರಿಸಿದರು.


ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025ರ ಪೋಸ್ಟರ ಬಿಡುಗಡೆಗೊಳಿಸಿದರು.


ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಚನ್ನಪ್ಪಗೌಡ ಬಿರಾದಾರ, ಪ್ರಾದ್ಯಾಪಕರಾದ ಡಾ.ಎಂ.ಕೆ.ತಾಂದಳೆ, ಡಾ.ಶ್ರೀಕಾಂತ ಕುಲಕರ್ಣಿ, ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶ ಕುಮಾರ ರಾಠೋಡ, ಡಾ.ವೆಂಕನಗೌಡ, ಡಾ.ಅಕ್ಷಯಕುಮಾರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಹೇಶ ಮೇಘಣ್ಣನವರ.

ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರಾದ ನರಸಪ್ಪ, ಡಾ.ಗೌತಮ ಅರಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Source www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

12 minutes ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

27 minutes ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

29 minutes ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

33 minutes ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

39 minutes ago