|

ಅತಿಥಿ ಉಪನ್ಯಾಸಕರು ಸಿಎಂ ಮನೆ ಮುಂದ ಪ್ರತಿಭಟನೆಗೆ ಸಿದ್ಧ.!

ತುಮಕೂರು.25.ಡಿಸೆಂಬರ್.25: ರಾಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದಿಂದ ಜ. 6ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಸರ್ಕಾರ ಕೋರ್ಟ್‌ಗೆ ನೀಡಿದ ಮೌಖಿಕ ಭರವಸೆ ಹುಸಿಗೊಳಿಸಿದೆ.

2 ದಶಕ ಸೇವೆ ಪರಿಗಣಿಸದೆ, ಅನರ್ಹ ಎಂಬ ಹಣೆಪಟ್ಟಿ ಕಟ್ಟಿ ಸುಮಾರು 6 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಎರಡು ದಶಕಗಳಿಂದ ಸೇವೆ ಪಡೆದು, ಈಗ ಕೆಲಸದಿಂದ ತೆಗೆಯಲಾಗಿದೆ’ ಎಂದು ಸಂಘದ ಅಧ್ಯಕ್ಷ ಪಿ.ಸಿ.ಲೋಕೇಶ್‌ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅತಿಥಿ ಉಪನ್ಯಾಸಕ ಮಂಜುನಾಥ್‌ ಜೋಗಿ, ‘ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಸತತ 1 ದಶಕ ಕಾರ್ಯ ನಿರ್ವಹಿಸಿದ ಉಪನ್ಯಾಸಕರನ್ನು ಕಾಯಂ ಮಾಡಬೇಕು ಎಂಬ ಆದೇಶ ಪಾಲಿಸುತ್ತಿಲ್ಲ’ ಎಂದು ದೂರಿದರು.

ಸಂಘದ ಪದಾಧಿಕಾರಿಗಳಾದ ಎಸ್‌.ಮನೋಹರ್, ರಂಗಸ್ವಾಮಿ ಗೋಷ್ಠಿಯಲ್ಲಿ ಹಾಜರಿದ್ದರು.

Similar Posts

Leave a Reply

Your email address will not be published. Required fields are marked *