ಬೀದರ 06.ಜನವರಿ.25 :- ಬೀದರ ಜಿಲ್ಲೆಯಾದ್ಯಂತ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ತಯ್ಯಾರಿಸಿ ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ತಹಸೀಲ್ ಕಛೇರಿ, ಸಹಾಯಕ ಆಯುಕ್ತರ ಕಛೇರಿ, ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿ ಹಾಗೂ ನಿಗದಿತ ಸ್ಥಳಗಳ ಸೂಚನಾ ಫಲಕಕ್ಕೆ ಅಚಿಟಿಸಿ ಪ್ರಚೂರ ಪಡಿಸಲಾಗಿರುತ್ತದೆ.
ಕಾರಣ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗಳಲ್ಲಿ ಇರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕೆಂದು ಬೀದರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ 01.01.2025 ಕ್ಕೆ ಅನ್ವಯಿಸುವಂತೆ (Special Summary Revision of Photo Electoral rolls w.r.t 01.01.2025) ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ ಒಟ್ಟು 1446445 ಮತದಾರರು ಇದ್ದು, ಆ ಪೈಕಿ 740462 ಪುರುಷ ಮತದಾರರು, 705938 ಮಹಿಳಾ ಮತದಾರರು ಹಾಗೂ 45 ತೃತೀಯ ಲಿಂಗ ಮತದಾರರಿರುತ್ತಾರೆ.
ಅಂತಿಮ ಮತದಾರರ ಪಟ್ಟಿಯ ಅರ್ಹ ಮತದಾರರು ತಮ್ಮ ಹೆಸರನ್ನು Voters helpline App ಅಥವಾ ಆನ್‌ಲೈನ್ (https://voters.eci.gov.in) ಮೂಲಕ ಪರಿಶೀಲಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಹಾಗೂ ಅಂತಿಮ ಮತದಾರರ ಪಟ್ಟಿಯನ್ನು (https://ceo.karnataka.gov.in) & (https://bidar.nic.in) ರ ವೆಬ್‌ಸೈಟ್ ಮೂಲಕ ಡೌನ್‌ಲೋಡ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದು. ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಅಂತಿಮ ಮತದಾರರ ಪಟ್ಟಿಯಂತೆ ಅಂಕಿ ಸಂಖ್ಯೆಗಳಿರುತ್ತವೆoದು ಅವರು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…