ಕೊಪ್ಪಳ.03.ಆಗಸ್ಟ.25: ಕೊಪ್ಪಳ ತಾಲ್ಲೂಕಿನ ಟಣಕನಕಲ್ ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಕೊನೆಯ ಸುತ್ತಿನ ದಾಖಲಾತಿಗೆ ಸಂಬಂಧಿಸಿದಂತೆ ಕೌನ್ಸಲಿಂಗ್ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಟಣಕನಕಲ್ ಆದರ್ಶ ವಿದ್ಯಾಲಯದ 6ನೇ ತರಗತಿಗೆ 1 ರಿಂದ 3ನೇ ಸುತ್ತಿನ ದಾಖಲಾತಿ ನಂತರ ಖಾಲಿ ಉಳಿದಿರುವ ಒಟ್ಟು 40 ಸೀಟುಗಳಿಗೆ ವಿವಿಧ ಮಿಸಲಾತಿವಾರು, 1:30 ಅನುಪಾತದಂತೆ ಒಂದು ಸೀಟಿಗೆ 30 ವಿದ್ಯಾರ್ಥಿಗಳಂತೆ ಕೌನ್ಸಲಿಂಗ್‌ಗೆ ಅರ್ಹವಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಆದರ್ಶ ವಿದ್ಯಾಲಯ ಟಣಕನಕಲ್ ಹಾಗೂ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ವಿದ್ಯಾರ್ಥಿಗಳಿಗೆ ಆಗಸ್ಟ್ 11 ರಿಂದ 14ರ ವರೆಗೆ ಬೆಳಿಗ್ಗೆ 10 ಗಂಟೆಗೆ ಟಣಕನಕಲ್ ಆದರ್ಶ ವಿದ್ಯಾಲಯದಲ್ಲಿ ಕೌನ್ಸಲಿಂಗ್ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಿರುವ ದೂರವಾಣಿ ಸಂಖ್ಯೆಗೆ ಈ ಕೌನ್ಸಲಿಂಗ್ ಬಗ್ಗೆ ರಾಜ್ಯ ಕಛೇರಿಯಿಂದ ಸಂದೇಶವನ್ನು ಅಥವಾ ಎಸ್.ಎಮ್.ಎಸ್ ಕಳಿಸಲಾಗುವುದು. ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತಪಡಿಸಿಕೊಂಡು ಕೌನ್ಸಲಿಂಗ್‌ಗೆ ಹಾಜರಾಗುವ ಸಂದರ್ಭದಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಮತ್ತು ಇತರೆ ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಟಣಕನಕಲ್ ಆದರ್ಶ ವಿದ್ಯಾಲಯಕ್ಕೆ ಶಾಲಾ ಅವಧಿಯಲ್ಲಿ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…