ಬೀದರ.14.ಏಪ್ರಿಲ್.25:- ಇಡೀ ದೇಶ ಮಾತ್ರವಲ್ಲದೇ ಜಗತ್ತಿಗೆ ಮಾದರಿ ವ್ಯಕ್ತಿತ್ವವನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೊಂದಿದ್ದರು ಹಾಗೂ ಅವರು ಎಲ್ಲಾ ಕ್ಷೇತ್ರಗಳಲ್ಲಿ ಮಹಾಜ್ಞಾನಿಯಾಗಿದ್ದರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತç ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಹೇಳಿದರು.
ಅವರು ಸೋಮವಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ನಿಮಿತ್ಯ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದರು.
134 ವರ್ಷಗಳ ಹಿಂದೆ ಅಸಮಾನತೆ, ಅಸ್ಪೃಶ್ಯತೆ, ಗುಲಾಮಗಿರಿ, ಅನ್ಯಾಯ, ದೌರ್ಜನ್ಯ ಮತ್ತು ಅನೇಕ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿದ್ದವು, ಇವುಗಳೆಲ್ಲವನ್ನೂ ಖಂಡಿಸಿ ಒಂದು ಸಮ ಸಮಾಜದ ನಿರ್ಮಾಣ ಮಾಡಲು ಹೊರಟು ದೀನ ದಲಿತರ, ಶೋಷಿತರ, ಕಾರ್ಮಿಕರ, ಮಹಿಳೆಯರ ಧ್ವನಿಯಾಗಿ ಹೋರಾಟ ಮಾಡಿದರು.
ಶಿಕ್ಷಣ, ಸಂಘಟನೆ ಮತ್ತು ಸಂಘರ್ಷ, ಹೋರಾಟದ ಮೂಲಕ ಎಲ್ಲರೂ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬಹುದು ಎಂದು ತೋರಿಸಿಕೊಟ್ಟರು. ಇವರು ಇಡೀ ಜಗತ್ತಿಗೆ ಮಾದರಿಯಾಗುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ. ನಮ್ಮ ಸಂವಿಧಾನದ ಆಶಯಗಳ ಮೂಲಕ ಒಂದು ಸದೃಢ ದೇಶದ ನಿರ್ಮಾಣ ಮತ್ತು ಅಭಿವೃದ್ಧಿಗೆ ಸಹಾಯಕವಾಗಿದೆ \ ಎಂದು ಹೇಳಿದರು.
ಹಿಂದುಳಿದ ವರ್ಗಗಳು, ದೀನ ದಲಿತರಿಗೆ ವಿಶೇಷ ಸವಲತ್ತುಗಳನ್ನು ನೀಡುವ ಮತ್ತು ಶೈಕ್ಷಣಿಕ ಕ್ರಾಂತಿಯ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಅಡಿಪಾಯ ಹಾಕಿದರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್.
ಸಮಾನ ನಾಗರಿಕ ಹಕ್ಕುಗಳು ಮತ್ತು ಕಾನೂನಾತ್ಮಕ ಹೋರಾಟ ಮಾಡಲು ಎಲ್ಲಾ ದುರ್ಬಲ ವರ್ಗದವರಿಗೆ ಅವಕಾಶ ಕಲ್ಪಿಸಿದರು. ಇವರು ಕೇವಲ ದಲಿತ, ಹಿಂದುಳಿದ ವರ್ಗಗಳ ನಾಯಕರು ಮಾತ್ರವಲ್ಲ, ಇವರು ಭವ್ಯ ಭಾರತದ ಪ್ರಜೆಗಳ ನಾಯಕ. ತನ್ನ ಇಡೀ ಜೀವನವನ್ನು ದೇಶದ ಭವ್ಯ ಭವಿಷ್ಯದ ನಿರ್ಮಾಣಕ್ಕಾಗಿ, ಒಂದು ಸಮ ಸಮಾಜದ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟವರು ಎಂದು ತಿಳಿಸಿದರು.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಇಂದಿನ ಯುವಪೀಳಿಗೆ ಅಂಬೇಡ್ಕರ್ ಅವರ ಆದರ್ಶಗಳು, ವಿಚಾರಧಾರೆಣೆಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಈಶ್ವರ ಸಿಂಗ್ ಠಾಕೂರ್, ಮಾರುತಿ ಬೌದ್ಧೆ, ಅನೀಲ ಬೆಲ್ದಾರ, ಆನಂದ ದೇವಪ್ಪ, ಪಂಡಿತರಾವ ಚಿದ್ರಿ, ಬಸವರಾಜ ಮಾಳಿಗೆ, ದೇವೆಂದ್ರ ಚಿದ್ರಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…