13ಡಿಸೆಂಬರ್24 ಬೀದರ್:-ಡಾ.ಬಿ.ಆರ್.ಅಂಬೇಡ್ಕರ್ ಅಬಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ (ಪುಡ್ ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್/ಗ್ರಾಮ ಒನ್/ ಸೇವಾ ಸಿಂಧುವಿನಲ್ಲಿ ಅನ್ಲೈನ್ ಮುಖಾಂತರ ದಿನಾಂಕ: 29-12-2024 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com