ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾಪೇಕಿಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ ಮತ್ತು ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಯೋಜನೆ(ಇತರೆ ಉದ್ದೇಶ) ಹಾಗೂ ಮೈಕ್ರೋಕ್ರೇಡಿಟ್ ಕಿರುಸಾಲ ಯೋಜನೆ, ಮತ್ತು ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್/ ಗ್ರಾಮ ಒನ್ / ಸೇವಾ ಸಿಂಧುವಿನಲ್ಲಿ ಆನ್‌ಲೈನ್ ಮುಖಾಂತರ ದಿನಾಂಕ: 10-09-2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.