08/06/2025 9:24 PM

Translate Language

Home » ಲೈವ್ ನ್ಯೂಸ್ » ಡಿಪ್ಲೋಮಾ ಇನ್ ಕೋ ಆಪರೇಟಿವ್
ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಅರ್ಜಿ ಅಹ್ವಾನ

ಡಿಪ್ಲೋಮಾ ಇನ್ ಕೋ ಆಪರೇಟಿವ್
ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಅರ್ಜಿ ಅಹ್ವಾನ

Facebook
X
WhatsApp
Telegram


ಬೀದರ, 06ಡಿಸೆಂಬರ್24 :- ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ “6 ತಿಂಗಳು/180‘’ ದಿನಗಳ ಅವಧಿಗೆ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು 2025ರ ಜನವರಿಯಿಂದ ಪ್ರಾರಂಭವಾಗುತ್ತಿದ್ದು. ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಕರ್ನಾಟಕ ಇನ್ಸ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಲಬುರಗಿಯಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಯು ಈ ತರಬೇತಿ ನೀಡಲಿದ್ದು, ಈ ತರಬೇತಿ ಪಡೆಯಲಿಚ್ಚಿಸುವÀ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಅದೇ ರೀತಿ ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ‘’ ವಿಶೇಷ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’’ ತರಬೇತಿಯನ್ನು ಸಹ ನೀಡಲಾಗುತ್ತದೆ.


ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿAದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟ್) ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ: 31-12-2024 ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ-585 105 ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ತರಬೇತಿ ಸಂಸ್ಥೆಯನ್ನು ಹಾಗೂ ದೂರವಾಣಿ ಸಂಖ್ಯೆ: 08472-245340, 9916726886, 9742307153, 9113916753 ಗೆ ಸಂಪರ್ಕಿಸಬಹುದಾಗಿದೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!